ಬೆಂಗಳೂರು ; ಕನ್ನಡದ ಹಿರಿಯ ನಟ, ಶಾಶ್ವತ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ.
25/5/2022ರ ದಿನಾಂಕದಂದು ಬರೆದಿರುವ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಎಂಬ ವಿಷಯದಲ್ಲಿ ಕಾರಣ ವಿವರಿಸಿದ್ದಾರೆ.
ಈ ಪತ್ರದ ಮೂಲಕ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.