ಬೆಂಗಳೂರು: ರಾಜ್ಯ ಸರಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಅವರು ನೇಮಕಗೊಂಡಿದ್ದು, ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.
ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ರಾಜ್ಯದ ಶಕ್ತಿ ಕೇಂದ್ರದ ಪ್ರಭಾವೀ ಸ್ಥಾನಗಳಲ್ಲಿರುವ ಮಹಿಳೆಯರಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.