ಬೆಂಗಳೂರು: ನಗರಕ್ಕೆ ಆಗಮಿಸಿದ್ದ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನದ ಸ್ಪಷ್ಟೀಕರಣ ಸಭೆಯಲ್ಲೇ ಘಟನೆ ನಡೆದಿದೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾಕೇಶ್ ಟಿಕಾಯತ್ ಮತ್ತು ಯುಧವೀರ್, ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಾಧ್ಯಮಗೋಷ್ಟಿಯಲ್ಲಿ ಕೆಲವರು ವಾಗ್ವಾದಕ್ಕಿಳಿದಿದ್ದು, ಕಪ್ಪು ಮಸಿ ಎರಚಿದ್ದಲ್ಲದೆ. ಕುರ್ಚಿಗಳನ್ನು ಮನಬಂದಂತೆ ಎಸೆದ ಘಟನೆಯೂ ನಡೆಯಿತು. ಈ ವೇಳೆ ಟಿಕಾಯತ್ ಮೇಲೆ ಹಲ್ಲೆ ಮಾಡಲು ಮುಂದಾದವನಿಗೂ ಸಭೆಯಲ್ಲಿದ್ದವರು ಸಖತ್ ಗೂಸಾ ಕೊಟ್ಟಿದ್ದಾರೆ.ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್, ಯುಧವೀರ್ ಮೇಲೆ ಮಸಿಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಳಿಬರುತ್ತಿರುವ ಆರೋಪ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಲು ರಾಷ್ಟ್ರೀಯ ನಾಯಕರು ಬಂದಿದ್ದರು. ಮಾಧ್ಯಮಗೋಷ್ಟಿ ನಡೆಯುವಾಗ ಏಕಾಏಕಿ 3 ಜನ ಧಾವಿಸಿ ಮಸಿ ಎರಚಿ ಹಲ್ಲೆಗೆ ಮುಂದಾದರು. ಅವರು ಯಾರೆಂಬ ಬಗ್ಗೆ ಮಾಹಿತಿ ಇಲ್ಲ, ಮಸಿ ಬಳಿಯುವ ವೇಳೆ ಅವರು ಏನನ್ನೂ ಮಾತನಾಡಿಲ್ಲ. ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ,
