ನವದೆಹಲಿ: 2021ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್ಸಿ) ಪರೀಕ್ಷೆಗಳ ಅಂತಿಮ ಫಲಿತಾಂಶ ಇಂದು ಪ್ರಕಟಗೊಂಡಿದೆ. ಒಟ್ಟು 685 ಅಭ್ಯರ್ಥಿಗಳು ಈ ಮಹತ್ವದ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಪ್ರಮುಖವಾಗಿ ಕರ್ನಾಟಕದ 25 ಅಭ್ಯರ್ಥಿಗಳು ಈ ಸಲದ ಅಂತಿಮ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಫಲಿತಾಂಶವನ್ನ UPSCಯ ಅಧಿಕೃತ ವೆಬ್‌ಸೈಟ್ http://www.upsc.gov.in ನಲ್ಲಿ ನೋಡಬಹುದು.
ಯುಪಿಎಸ್ಸಿ ಅಭ್ಯರ್ಥಿಗಳ ಪಟ್ಟಿಯುಪಿಎಸ್ಸಿ ಅಭ್ಯರ್ಥಿಗಳ ಪಟ್ಟಿಯುಪಿಎಸ್ಸಿ ಪ್ರಕಟಿಸಿರುವ ಪಟ್ಟಿ ಪ್ರಕಾರ ದೆಹಲಿಯ ಸೇಂಟ್ ಸ್ವೀಫನ್ಸ್ ಕಾಲೇಜ್ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿನಿ ಶೃತಿ ಶರ್ಮಾ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಜಾಮಿಯಾ ಮಿಲಿಯಾ ಕೋಚಿಂಗ್ ಅಕಾಡೆಮಿಯಲ್ಲಿ ಸಿವಿಲ್ ಸರ್ವೀಸ್ ಪರೀಕ್ಷೆಯ ತಯಾರಿ ನಡೆಸಿದ್ದರು. ಎರಡನೇ ಸ್ಥಾನವನ್ನ ಅಂಕಿತಾ ಅಗರ್ವಾಲ್ ಗಿಟ್ಟಿಸಿಕೊಂಡಿದ್ದು, ಗಾಮಿನಿ ಸಿಂಗ್ಲಾ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ವಿಶೇಷ ಎಂದರೆ ಮೊದಲ ನಾಲ್ಕು ಸ್ಥಾನಗಳು ಮಹಿಳೆಯರ ಪಾಲಾಗಿದ್ದು, ವಿಶೇಷವಾಗಿದೆ. ನಾಲ್ಕನೇ ಸ್ಥಾನದಲ್ಲಿ ಐಶ್ವರ್ಯ ವರ್ಮಾ ಇದ್ದಾರೆ.ಯುಪಿಎಸ್ಸಿ ಅಭ್ಯರ್ಥಿಗಳ ಪಟ್ಟಿಯುಪಿಎಸ್ಸಿ ಅಭ್ಯರ್ಥಿಗಳ ಪಟ್ಟಿ2011ರ ನಾಗರಿಕ ಸೇವಾ ಪರೀಕ್ಷೆಗಳ ಲಿಖಿತ ಪರೀಕ್ಷೆ ಕಳೆದ ಜನವರಿ ತಿಂಗಳಲ್ಲಿ ನಡೆಸಲಾಗಿತ್ತು. ಸಂದರ್ಶನ ಏಪ್ರಿಲ್ – ಮೇ ತಿಂಗಳಲ್ಲಿ ನಡೆಸಲಾಗಿತ್ತು. ಈ ಮಹತ್ವದ ಪರೀಕ್ಷೆಯಲ್ಲಿ ಪಾಸ್ ಆಗಿರುವ ಒಟ್ಟು 685 ಅಭ್ಯರ್ಥಿಗಳು ಇದೀಗ ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರದ ವಿವಿಧ ಸೇವೆ, ಗ್ರೂಪ್ ಎ ಮತ್ತು ಗ್ರೂ ಬಿ ಸ್ಥಾನಕ್ಕಾಗಿ ನೇಮಕ ಆಗಲಿದ್ದಾರೆ.
ಅಂತಿಮ ಪರೀಕ್ಷೆಯಲ್ಲಿ ಪಾಸ್ ಆಗಿರುವ 685 ಅಭ್ಯರ್ಥಿಗಳ ಪೈಕಿ 244 ಸಾಮಾನ್ಯ ವರ್ಗ, 73 ಆರ್ಥಿಕವಾಗಿ ದುರ್ಬಲವಾಗಿರುವ ವರ್ಗ, 203 ಇತರೆ ಹಿಂದುಳಿದ ವರ್ಗ, 105 ಪರಿಶಿಷ್ಟ ಜಾತಿ ಮತ್ತು 60 ಪರಿಶಿಷ್ಟ ಪಂಗಡದಿಂದ ಆಯ್ಕೆಯಾಗಿದ್ದಾರೆಂದು ಆಯೋಗ ತಿಳಿಸಿದೆ. ಅಭ್ಯರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಮಾಹಿತಿ ಪಡೆದುಕೊಳ್ಳಲು 23385271/23381125 /23098543 ನಂಬರ್ಗೆ ಕರೆ ಮಾಡುವಂತೆ ತಿಳಿಸಿದೆ.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …