ಬೆಂಗಳೂರು: ಆರೋಗ್ಯ ಸಚಿವ ಡಾ. ಸುಧಾಕರ್ಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ಸಣ್ಣ ಪ್ರಮಾಣದ ಜ್ವರ ಬಂದಿದ್ದರಿಂದ ತಪಾಸಣೆ ಮಾಡಿಕೊಂಡಾಗ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ.
ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್ನ ಮೂರು ಅಲೆಗಳ ಸಂದರ್ಭಗಳಲ್ಲಿಯೂ ಸೋಂಕಿನಿಂದ ಪಾರಾಗಿ ಈಗ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ. ಕೋವಿಡ್ನ ಕೆಲ ಲಕ್ಷಣಗಳು ತಮ್ಮಲ್ಲಿ ಕಾಣಿಸಿಕೊಂಡಿವೆ. ಹೋಂ ಐಸೋಲೇಷನ್ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಂಪೂರ್ಣ ಲಸಿಕೆ ಪಡೆದಿರುವುದರಿಂದ ಅಪಾಯದಿಂದ ಪಾರಾಗಿದ್ದೇನೆ. ಇತ್ತೀಚಿನ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವವರು ಒಮ್ಮೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಚಿವರು ಮನವಿ ಮಾಡಿದ್ದಾರೆ.
Check Also
ವಿಧಾನ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ ಗುಂಡಿ ನಿಧನ
Spread the loveಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ , ವಕೀಲರು ಹಾಗೂ …