ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಚ್ಚ ನ್ಯಾಯಾಲಯದ ಆದೇಶದ ಮೇಲೆ 11 ಪ್ರಕರಣಕ್ಕೆ ತಡೆಯಾಜ್ಞೆ ಬಂದಿದೆ. ಉಳಿದ ಪ್ರಕರಣ ತನಿಖೆಯ ಹಂತದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಭದ್ರ ಪಡಿಸಲು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದರು.
ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಪ್ರಕರಣಕ್ಕೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಇದೇ 07ರಂದು ಹೀಯರಿಂಗ್ ಇದೆ. ಅಲ್ಲದೇ ಮುಂದಿನ ಕ್ರಮಗಳನ್ನು ಪೊಲೀಸ್ ಆಯುಕ್ತರು ಕೈಗೊಳ್ಳುತ್ತಾರೆ ಎಂದರು.
ಪ್ರಮೋದ್ ಮುತಾಲಿಕ್ ಹೇಳಿಕೆ ಹಾಗೂ ಧ್ವನಿವರ್ಧಕಗಳ ಕುರಿತಾದ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಧ್ವನಿವರ್ಧಕಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಏನು ಕ್ರಮಗಳನ್ನು ಕೈಗೊಳ್ಳಬೇಕು ಅದನ್ನು ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.
ಮುತಾಲಿಕ್ ಹೇಳಿಕೆ ಬಗ್ಗೆ ಪರಿಶೀಲನೆ ನಡೆಸಿ ಯಾವುದಾದರ ಬಗ್ಗೆ ಹೀಗೆ ಮಾತನಾಡಿದ್ದಾರೆ ಎಂದು ಕೂಲಂಕಷವಾಗಿ ಪರಿಶೀಲನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …