ಹುಬ್ಬಳ್ಳಿ:ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ
ಕಾರು ಎತ್ತಿನ ಗಾಡಿ ನಡುವೆ ಅಪಘಾತ ಸಂಭವಿಸಿ
ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಹುಬ್ಬಳ್ಳಿ ಗದಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದ್ದು,
ಅಶೋಕ್ ಬೆಟಸೂರು ಎನ್ನುವ ರೈತನಿಗೆ ಸೇರಿದ ಎತ್ತು ಆಗಿದೆ.
ಭಾನುವಾರ ಬೆಳಿಗ್ಗೆ ಹೊಲಕ್ಕೆ ಹೋಗುವಾಗ ಎದುರಿನಿಂದ ಬಂದ ಕಾರ್ ಡಿಕ್ಕಿಯಾಗಿದೆ.
ಗದಗನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ನೇರವಾಗಿ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದು ರಸ್ತೆ ಕೆಳಗೆ ನುಗ್ಗಿದ ಕಾರು. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ಪರಿಶೀಲನೆ ಮಾಡಿದರು .
