Breaking News

ಚಲಿಸುತ್ತಿರುವ ರೈಲಿನಲ್ಲಿ ಪ್ರಾಣದ ಹಂಗು ತೊರೆದು ಯುವಕನೋರ್ವ ಹುಚ್ಚಾಟ

Spread the love

ಹುಬ್ಬಳ್ಳಿ;ಚಲಿಸುತ್ತಿರುವ ರೈಲಿನಲ್ಲಿ ಪ್ರಾಣದ ಹಂಗು ತೊರೆದು ಯುವಕನೋರ್ವ ಹುಚ್ಚಾಟ ಮೆರೆಸಿರುವ ಘಟನೆ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿದ್ದ ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ ಟ್ರೈನಿನಲ್ಲಿ ಈ ಘಟನೆ ನಡೆದಿದೆ. ಇನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನ ಬಾಗಿಲಿನಿಂದ ಮುಂದೆ ಭಾಗಿ ಕೈಗೆ ಸಿಕ್ಕ ಸಿಕ್ಕ ಗಿಡಗಳ ಎಲೆಗಳನ್ನು ಹರಿಯುವದು, ಕಾಲಿನಿಂದ ಒದೆಯುವ ಯತ್ನ ಜೊತೆಹೆ ರೈಲಿನ ಬಾಗಿಲು ಹಿಡಿದು ಜೋಕಾಲಿ ಆಡುವ ಮೂಲಕ ಹುಚ್ಚಾಟ ಮೆರೆದ್ದಾನೆ. ಯುವಕ ಹುಚ್ಚಾಟ ಪ್ರದರ್ಶನವನ್ನ ಅದೇ ಟ್ರೈನಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೋರ್ವ ಯುವಕ ವಿಡಿಯೋ ಮಾಡಿದ್ದಾನೆ. ಈ ಹಿಂದೆ ಹಲವು ಬಾರಿ ರೈಲು ವೇಗವಾಗಿ ಚಲಿಸುವ ವೇಳೆ ಈ ರೀತಿಯ ಹುಚ್ಚಾಟ ಮೆರೆದು ಜೀವಹಾನಿ ಆದ ಅನೇಕ ಉದಾಹರಣೆಗಳಿವೆ. ಜೊತೆಗೆ ರೈಲ್ವೆ ಇಲಾಖೆ ಇಂತಹ ದುಸ್ಸಾಹಸಕ್ಕೆ ಮುಂದಾಗುವವರ ವಿರುದ್ಧ ಸಾಕಷ್ಟು ಬಾರಿ ಜಾಗೃತಿ ಮೂಡಿಸಿದ್ದಾರೆ. ಆದ್ರೂ ಕೆಲವರು ಇಂತಹ ಹುಚ್ಚು ಪ್ರದರ್ಶನಕ್ಕೆ ಮುಂದಾಗಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣ ಆಗಿದೆ. ಇನ್ನು ಯುವಕನೋರ್ವ ಹುಚ್ಚಾಟ ಪ್ರದರ್ಶಿಸಿರುವ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.


Spread the love

About Karnataka Junction

    Check Also

    ರಂಜಾನ್‌ ಹಬ್ಬದ ನಿಮಿತ್ತ ಅಟೋ ಚಾಲಕ ಮಾಲೀಕರಿಗೆ ಹಣ್ಣು ಹಂಪಲ ವಿತರಣೆ

    Spread the loveರಂಜಾನ್‌ ಹಬ್ಬದ ನಿಮಿತ್ತ ಅಟೋ ಚಾಲಕ ಮಾಲೀಕರಿಗೆ ಹಣ್ಣು ಹಂಪಲ ವಿತರಣೆ ಹುಬ್ಬಳ್ಳಿ: ರಂಜಾನ್‌ ಹಬ್ಬದ ನಿಮಿತ್ತ …

    Leave a Reply

    error: Content is protected !!