Breaking News

ಕಲುಷಿತ ನೀರು ಪೂರೈಕೆ: ರಾಯಚೂರು ಬಂದ್

Spread the love

ರಾಯಚೂರು: ‘ನಗರಸಭೆಯಿಂದ ಪೂರೈಕೆ ಮಾಡಿದ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಖಂಡಿಸಿ ಸೋಮವಾರ ರಾಯಚೂರು ನಾಗರಿಕರ ವೇದಿಕೆ ವತಿಯಿಂದ ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘ ಸಂಸ್ಥೆಗಳ ಮುಖಂಡರು, ವ್ಯಾಪಾರಸ್ಥರು ಬೆಂಬಲ ನೀಡಿದ್ದಾರೆ.
ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದ್ದು ನಗರಸಭೆಯ ಶುದ್ಧ ಕುಡಿಯುವ ನೀರು ನೀಡುವ ಭರವಸೆ ಈಡೇರಿಲ್ಲ. ಕಲುಷಿತ ನೀರು ಸೇವಿಸಿ ಇಂದಿರಾ ನಗರದ ಮಲ್ಲಮ್ಮ ಹಾಗೂ ಲಾಲ್ ಪಹಾಡಿ ಬಡಾವಣೆಯ ಗಫರ್ ಸಾವನ್ನಪ್ಪಿದ್ದಾರೆ. ಇದಕ್ಕೆ ನಗರಸಭೆ ಬೇಜವಾಬ್ದಾರಿಯೇ ಕಾರಣ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಜಲಜೀವನ ಮಿಷನ್, ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಇದುವರೆಗೂ ಪೂರ್ಣಗೊಂಡಿಲ್ಲ. ಇದರಿಂದ ನಾಗರಿಕರಿಗೆ ಸಮರ್ಪಕ ಹಾಗೂ ಶುದ್ಧ ನೀರು ಪೂರೈಕೆಯಾಗುತ್ತಿಲ್ಲ.
ಈ ಜಲಜೀವನ ಮಿಷನ್, ನಿರಂತರ ಕುಡಿಯುವ ನೀರು ಪೂರೈಕೆ ಕೇವಲ ಪ್ರಚಾರಕ್ಕೆ ಉಪಯೋಗಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು ‌
ಹೀಗಾಗಿ ನಗರಸಭೆ ಆಡಳಿತ ಮಂಡಳಿಗೆ ಬಿಸಿ ಮುಟ್ಟಿಸಲು ಸೋಮವಾರ ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ. ಎಲ್ಲರೂ ಪಕ್ಷಾತೀತವಾಗಿ ಬೆಂಬಲಿಸಬೇಕು ಹಾಗೂ ಸಂಘ ಸಂಸ್ಥೆಯ ಮುಖಂಡರು, ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್ ಮಾಡಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಹೋರಾಟದ ನೇತೃತ್ವ ವಹಿಸಿರುವ ಅಮರೇಶ ಮನವಿ ಮಾಡಿದ್ದಾರೆ.


Spread the love

About Karnataka Junction

    Check Also

    ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ

    Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …

    Leave a Reply

    error: Content is protected !!