ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ನನ್ನು ಬಂಧನ ಮಾಡಲಾಗಿದೆ. ಇನ್ನೂ, ಉಗ್ರನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ವಿಚಾರ ಲಭ್ಯವಾಗಿದೆ. ಬಂಧಿತ ಆರೋಪಿ ಹಿಜ್ಬುಲ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎಂಬ ಮಾಹಿತಿ ಇದೀಗ ಸಿಕ್ಕಿದೆ.
ಬೆಂಗಳೂರಿನಲ್ಲಿ ಜಮ್ಮು ಕಾಶ್ಮೀರ ಪೊಲೀಸರು ಬಂಧಿಸಿದ್ದ ತಾಲಿಬ್ ಹುಸೇನ್ ಕಳೆದ 6 ವರ್ಷದ ಹಿಂದೆ ಹಿಜ್ಬುಲ್ ಸಂಘಟನೆಯಲ್ಲಿ ಕಾರ್ಯಕರ್ತನಾಗಿದ್ದ. ಈ ಹಿಜ್ಬುಲ್ ಸಂಘಟನೆಯಲ್ಲಿ ಆತನನ್ನು ಕಮಾಂಡೋ ಎನ್ನುವ ರೀತಿಯಲ್ಲಿ ಈತನ ಬಿಂಬಿಸಲಾಗುತ್ತಿತ್ತು. ಈ ಹಿಜ್ಬುಲ್ ಸಂಘಟನೆ ಹಿಂದೂ ಕಾರ್ಯಕರ್ತರ ಹತ್ಯೆ ಮಾಡುವ ಸಂಘಟನೆಯಾಗಿದೆ.
ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರ ಸಹಾಯ ಪಡೆದ ಜಮ್ಮು– ಕಾಶ್ಮೀರದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಬಗ್ಗೆ ಜಮ್ಮು- ಕಾಶ್ಮೀರದ ಐಜಿಪಿ ಅವರು ಹಿಜ್ಬುಲ್ ಸಂಘಟನೆಯಲ್ಲಿ ಇರುವುದನ್ನು ಸ್ಪಷ್ಟನೆ ನೀಡಿದ್ದಾರೆ.