ಬಾಗಲಕೋಟೆ : ಮೈಮೇಲೆ ಗೇಟ್ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ತಿಂಗಳ ಮೇ 31 ರಂದು ಈ ಘಟನೆ ನಡೆದಿದ್ದು, 8 ವರ್ಷದ ಬಾಲಕ ರಂಜಿತ ಸೂರಗೊಂಡ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ನಂಬಿದ್ದರು. ನಂತರ ಗ್ರಾಮದ ಬಸವೇಶ್ವರ ಸಮುದಾಯ ಭವನದ ಪಿ.ಕೆ.ಪಿ.ಎಸ್ ಸಂಸ್ಥೆಯ ಸಿಸಿಟಿವಿ ಫೂಟೇಜ್ ವೀಕ್ಷಿಸಿದಾಗ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಇನ್ನೂ, ಅವೈಜ್ಞಾನಿಕವಾಗಿ ಗೇಟ್ ಅಳವಡಿಸಿದ್ದರು ಎಂಬ ಆರೋಪ ಕೇಳಿಬಂದಿದ್ದು ಸಾವಳಗಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Check Also
ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ
Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …