ಕಲುಷಿತ ನೀರು ಕುಡಿದು ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದು ಮೃತರ ಸಂಖ್ಯೆ 4ಕ್ಕೆ ಏರಿಕೆ

Spread the love

ರಾಯಚೂರು: ನಗರದಲ್ಲಿ ಸರಬರಾಜು ಮಾಡಿದ ಕಲುಷಿತ ನೀರು ಕುಡಿದು ಅನಾರೋಗ್ಯಕ್ಕೆ ತುತ್ತಾಗಿ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಆರೋಪ ಕೇಳಿ ಬಂದಿದೆ. ನಗರದ 8ನೇ ವಾರ್ಡ್‌ನ ಅಂದ್ರೂನ್ ಕಿಲ್ಲಾದ ಅಬ್ದುಲ್ ಕರೀಂ(50) ಮೃತ ವ್ಯಕ್ತಿ.
ಕಲುಷಿತ ನೀರು ಕುಡಿದು ವಾಂತಿ, ಭೇದಿಯಾಗಿ ಬಳಲುತ್ತಿದ್ದರು. ಹೀಗಾಗಿ ಕಳೆದ ಮೂರು ದಿನದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅಲ್ಲದೇ ಕಲುಷಿತ ನೀರಿನಿಂದ ಕಿಡ್ನಿ ಮೇಲೆ ಪರಿಣಾಮ ಬೀರಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತ ವ್ಯಕ್ತಿ ಇಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡುತ್ತಿದ್ದರು.
ಇನ್ನೂ ವಾರದ ಹಿಂದೆ ಕಲುಷಿತ ನೀರು ಕುಡಿದು 60ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಮಲ್ಲಮ್ಮ (40), ಅಬ್ದುಲ್ ಗಫೂರ್ (37), ಅರಬ್ ಮೊಹಲ್ಲಾ ಮಹ್ಮದ್ ನೂರ್ (43) ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟಿದ್ದು, ಇದೀಗ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 4ಕ್ಕೆ ಏರಿದೆ.


Spread the love

About gcsteam

    Check Also

    ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರಾಂಕ್: ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಮಹತ್ವದ ಸಾಧನೆ

    Spread the loveಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. …

    Leave a Reply