Breaking News

ಹಿಜಾಬ್ ವಿವಾದದ ನಡುವೆಯೂ ರಾಜ್ಯಾದ್ಯಂತ ಪಿಯುಸಿ ಕಾಲೇಜು​ ತರಗತಿಗಳು ಇಂದಿನಿಂದ ಆರಂಭ

Spread the love

ಬೆಂಗಳೂರು: ರಾಜ್ಯಾದ್ಯಂತ ಪಿಯುಸಿ ಕಾಲೇಜು​ ತರಗತಿಗಳು ಇಂದಿನಿಂದ ಆರಂಭವಾಗಲಿವೆ. ಹಿಜಾಬ್ ವಿವಾದದ ಹಿನ್ನೆಲೆ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿಯೇ ರಾಜ್ಯ ಶಿಕ್ಷಣ ಇಲಾಖೆ ಸಮವಸ್ತ್ರ ಧರಿಸುವಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಪಿಯು ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ. ಕಾಲೇಜು ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರವನ್ನೇ ಧರಿಸಬೇಕು. ಒಂದು ವೇಳೆ ಕಾಲೇಜು ಅಭಿವೃದ್ಧಿ ಮಂಡಳಿ ಅಥವಾ ಆಡಳಿತ ವರ್ಗ ಸಮವಸ್ತ್ರ ಕಡ್ಡಾಯಗೊಳಿಸದಿದ್ದರೆ ವಿದ್ಯಾರ್ಥಿಗಳು ಸಮಾನತೆ ಮತ್ತು ಏಕತೆ ಕಾಪಾಡುವಂತಹ ಉಡುಪು ಧರಿಸಬೇಕು. ಸಾರ್ವಜನಿಕ ವ್ಯವಸ್ಥೆಗೆ ಧಕ್ಕೆಯಾಗುವಂತಹ ಬಟ್ಟೆ ಧರಿಸಲು ಅವಕಾಶವಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪಿಯು ಕಾಲೇಜು ಆಡಳಿತ ಮಂಡಳಿಗೆ ಹೊರಡಿಸಿದ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ.ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗಳಿಗೆ ಆಗಮಿಸಲು ಅವಕಾಶ ಇರುವುದಿಲ್ಲ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಹೇಳಿದೆ. ತರಗತಿಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ಇಲ್ಲವೆಂದು ಹೈಕೋರ್ಟ್ ತೀರ್ಪು ನೀಡಿದ ನಂತರ ಸಮವಸ್ತ್ರದ ಬಗ್ಗೆ ಯಾವುದೇ ಗೊಂದಲಕ್ಕೆ ಅವಕಾಶ ಇರಬಾರದೆಂದು ಕಾಲೇಜು ಆರಂಭಕ್ಕೂ ಮುನ್ನವೇ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿ ಗೊಂದಲ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿದೆ.
ಹಿಜಾಬ್ ವಿವಾದದ ಕುರಿತ ವಿಚಾರಣೆ ಸುಪ್ರಿಂ ಕೋರ್ಟ್​ನಲ್ಲಿ ಬಾಕಿಯಿದ್ದು, ರಾಜ್ಯ ಸರ್ಕಾರವು ಹೈಕೋರ್ಟ್ ತೀರ್ಪಿನ ಪ್ರಕಾರ ಹಿಜಾಬ್​ನಂತಹ ಉಡುಪು ಧರಿಸಲು ಅವಕಾಶ ನೀಡದೇ, ಸಮವಸ್ತ್ರ ಧಾರಣೆ ಕಡ್ಡಾಯಗೊಳಿಸಿ ಮಾರ್ಗಸೂಚಿ ರೂಪಿಸಿದೆ.ಇನ್ನು ಪಿಯು ಕಾಲೇಜುಗಳಿಗೆ ಶೈಕ್ಷಣಿಕ ವೇಳಾಪಟ್ಟಿಯನ್ನ ಸಹ ಸಾರ್ವಜನಿಕ ಶಿಕ್ಷಣ ಇಲಾಖೆ ನಿಗದಿಪಡಿಸಿದೆ. ಜೂನ್ 9 ರಿಂದ ಸೆಪ್ಟೆಂಬರ್ 30 ರವರೆಗೆ ಮೊದಲ ಅವಧಿ. ಅಕ್ಟೋಬರ್ 1 ರಿಂದ 12 ರವರೆಗೆ ಮಧ್ಯಂತರ ರಜೆ. ಅಕ್ಟೋಬರ್ 13 ರಿಂದ ಮಾರ್ಚ್ 31 ರವರೆಗೆ ಶೈಕ್ಷಣಿಕ ವರ್ಷದ ಎರಡನೇ ಅವಧಿ. ಏಪ್ರಿಲ್ ಒಂದರಿಂದ ಬೇಸಿಗೆ ರಜೆ ನೀಡಲಾಗಿದೆ.


Spread the love

About Karnataka Junction

[ajax_load_more]

Check Also

ವಿವಿಧ ಬೇಡಿಕೆಗಳ ಆಗ್ರಹಿಸಿ ಮಾರ್ಚ್ 3 ಕ್ಕೆ ರಾಜ್ಯ ಹೆದ್ದಾರಿ ಬಂದ್.

Spread the loveಕುಂದಗೋಳ: ತಾಲೂಕಿನ ಅತಿ ದೊಡ್ಡ ಗ್ರಾಮವಾದ ಸಂಶಿ ಗ್ರಾಮದ ಸೌಲಭ್ಯೆಗಳಾಗಿ ಅನೇಕ ಬಾರಿ ಮನವಿ ಸಲ್ಲಿಸಿದರು ಇದುವರೆಗೂ …

Leave a Reply

error: Content is protected !!