ಹುಬ್ಬಳ್ಳಿ : ನಾಲ್ಕು ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ , ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜನರಿಗೆ ಈಗ ತಮ್ಮ ತಪ್ಪಿನ ಅರಿವಾಗಿದ್ದು, ಈಗ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದೆ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
*ಪಠ್ಯದಲ್ಲಿ ಗೊಂದಲ* ಪಠ್ಯ ಪುಸ್ತಕದಲ್ಲಿ ಸಾಕಷ್ಟು ಗೊಂದಲ ಮಾಡಲಾಗಿದೆ, ರೋಹಿತ ಚರ್ಕವರ್ತಿ ಒಬ್ಬ ಟೋಷನ್ ಹೇಳುವವರು ಅಂತ ವ್ಯಕ್ತಿಯನ್ನು ಪಠ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ಮಾಡಿದ್ದು ತಪ್ಪು ಎಂದರು
ಬಸವರಾಜ ಹೊರಟ್ಟಿ ಅವರು ಕೋಮುವಾದಿ ಪಕ್ಷ ಸೇರಿದ್ದಕ್ಕೆ ಅವರಿಗೆ ಹಿನ್ನಡೆಯಾಗುತ್ತದೆ, ಇದರಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಶಕ್ತಿ ಸಿಕ್ಕಿದೆ ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
*ಪೆಟ್ರೋಲ್, ಡಿಸೇಲ್, ಅಡುಗೆ ಅನೀಲ, ತರಕಾರಿ ಸೇರಿದಂತೆ ವಸ್ತುಗಳ ಬೆಲೆ ಏರಿಕೆ*
ದೇಶದಲ್ಲಿ ಪೆಟ್ರೋಲ್, ಡಿಸೇಲ್, ಅಡುಗೆ ಅನೀಲ, ತರಕಾರಿ ಸೇರಿದಂತೆ
ಎಲ್ಲದರ ಬೆಲೆ ಏರಿಕೆ ಕಂಡಿವೆ. ಪೆಟ್ರೋಲ್ ಡಿಸೈಲ್ ದರವನ್ನು ದರವನ್ನು ಏರಿಕೆ ಮಾಡಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಮಾಡಿತು. ಇದೊಂದು ರಾಜಕೀಯ ಲಾಭಕ್ಕಾಗಿ ಮಾಡಿದ್ದಾರೆ.
14 ಕೋಟಿ ಜನರು ಉದ್ಯೋಗವಿಲ್ಲದೆ ಬಳಲುತ್ತಿದ್ದಾರೆ. ಜನರ ಬದುಕು ಅಸಹನೀಯವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಆದರೆ, ದೇಶದಲ್ಲಿ ಪ್ರಜಾಪ್ರಭುತ್ವದ ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರು ಒಬ್ಬ ಸಮರ್ಥ ಅಭ್ಯರ್ಥಿಯಾಗಿದ್ದು ಈ ಸಲ ಅವರು ಗೆಲುವು ಶತ ಸಿದ್ಧ ಎಂದರು.
ಶಾಸಕ ಅಬ್ಬಯ್ಯಾ ಪ್ರಸಾದ್, ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಪ್ ಹಳ್ಳೂರು, ಗ್ರಾಮಾಂತರ ಜಿಲ್ಲಾಧ್ಯಕ್ಷ ಅನೀಲಕುಮಾರ ಪಾಟೀಲ್, ಸದಾನಂದ ಡಂಗನಬರ, ರಾಜಶೇಖರ ಮೆಣಸಿನಕಾಯಿ, ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಗಂಗಾಧರ ದೊಡ್ಡದಾಡ, ಬಂಗಾರೇಶ ಹಿರೇಮಠ ಮುಂತಾದವರಿದ್ದರು.