ಬೆಂಗಳೂರು : ಒಂದೆಡೆ ರಾಜ್ಯಸಭೆ ಚುನಾವಣೆಗೆ ಜೆಡಿಎಸ್ನಿಂದ ಕಣಕ್ಕಿಳಿದಿರುವ ಡಿ. ಕುಪೇಂದ್ರ ರೆಡ್ಡಿ ಅವರು ಮತಯಾಚನೆಯಲ್ಲಿ ನಿರತರಾಗಿದ್ದಾರೆ. ಮತ್ತೊಂದೆಡೆ ಅವರು ರಾಜಕಾರಣಿಗಳಿಗೆ ಕೋಟಿ, ಕೋಟಿ ಸಾಲ ನೀಡಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಬೆಳಕಿಗೆ ಬಂದಿದೆ.
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುಟುಂಬದವರಿಗೆ ಕುಪೇಂದ್ರ ರೆಡ್ಡಿ ಅವರು ಕೋಟ್ಯಂತರ ರೂ. ಸಾಲ ಕೊಟ್ಟಿದ್ದಾರೆ. ದೇವೇಗೌಡರ ಪುತ್ರ ಹೆಚ್.ಡಿ.ರಮೇಶ್ ಅವರಿಗೆ 3.90 ಕೋಟಿ ರೂ., ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣಗೆ 2 ಕೋಟಿ ರೂ., ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 1 ಕೋಟಿ ರೂ., ಹೆಚ್.ಡಿ. ರೇವಣ್ಣ ಪುತ್ರ ಸೂರಜ್ ರೇವಣ್ಣಗೆ 5.80 ಕೋಟಿ ರೂ. ನೀಡಿದ್ದಾರೆ.ಅಲ್ಲದೇ, ಇವರ ಜೊತೆಗೆ ಶಾಸಕ ಸಿ.ಎಸ್. ಪುಟ್ಟರಾಜು ಮಗನಿಗೆ 6.5 ಕೋಟಿ, ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ 1 ಕೋಟಿ ರೂ., ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್‌ಗೆ 3.25 ಕೋಟಿ ರೂ. ಸಾಲ ನೀಡಿದ್ದಾರೆ. ಇನ್ನು ಹೆಚ್.ಡಿ.ಕುಮಾರಸ್ವಾಮಿ ಒಡೆತನದ ಚೆನ್ನಾಂಬಿಕಾ ಫಿಲ್ಮ ಸಂಸ್ಥೆಗೆ 4 ಕೋಟಿ ರೂ. ಸಾಲ ನೀಡಿದ್ದಾರೆ ಎಂಬ ಮಾಹಿತಿ ಅಫಿಡೇವಿಟ್ನಲ್ಲಿ ಉಲ್ಲೇಖವಾಗಿದೆ.
ಅದೇ ರೀತಿ ಕಾಂಗ್ರೆಸ್‌ನ ಮಾಜಿ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಅವರಿಗೆ 5 ಲಕ್ಷ ರೂ. ಸಾಲ ನೀಡಿರುವುದು ಉಲ್ಲೇಖವಾಗಿದೆ.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …