ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವು ಬಿಟ್ಟುಕೊಟ್ಟ ಅಶ್ವತ್ಥ ನಾರಾಯಣ, ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ. ಪರಿಸ್ಥಿತಿಗೆ ಅನುಗುಣವಾಗಿ ಯಾರು ಯಾರು ಬರುತ್ತಾರೆ ಅನ್ನೋದು ಗೊತ್ತಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ ಎಂದ ಅವರು, ಯುಪಿಯಲ್ಲಿ ಹಿಂಸಾಚಾರ ಹೋರಾಟ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ, ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ ಇದು ಸರಿಯಲ್ಲ ಎಂದು ಕಿಡಿಕಾರಿದರು.
ದೇಶದ ಐಕ್ಯತೆ ವಿಚಾರದಲ್ಲಿ ಹಿಂದಾಚಾರ ನಡೆಸುವುದು ಸರಿಯಲ್ಲ. ರಾಜ್ಯಸಭೆಯಲ್ಲಿ ಎ ಟೀಂ ಬಿ ಟೀಂ ಅಂತ ಎನ್ನುವ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಜಾಸ್ತಿ ಇದೆ ಹೀಗಾಗಿ ಸಹಜವಾಗಿ ಗೆಲುವಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಎಲ್ಲ ಗೊಂದಲಗಳು ನಿವಾರಣೆಯಾಗಿದೆ. ಈ ಬಗ್ಗೆ ಮತ್ತೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
