ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯ ಶವವೊಂದು ಕೊಲೆ ಮಾಡಿರುವ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿ-ಉಣಕಲ್ ರೈಲ್ವೆ ನಿಲ್ದಾಣಗಳ ನಡುವಿನ ದೇಶಪಾಂಡೆನಗರದ ಓವರ್ ಬ್ರಿಡ್ಜ್ ಬಳಿಯಲ್ಲಿ ನಡೆದಿದೆ.
ಸುಮಾರು 40 ವಯಸ್ಸಿನ ಅಪರಿಚಿತ ವ್ಯಕ್ತಿಯ ಶವವು ಕೊಲೆಯಾದ ರೀತಿಯಲ್ಲಿ ದೊರೆತಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ದುಷ್ಕರ್ಮಿಗಳು ಯಾವುದೋ ಉದ್ದೇಶಕ್ಕಾಗಿ ಕೊಲೆ ಮಾಡಿ ರೈಲ್ವೆ ಹಳಿಯ ಪಕ್ಕದಲ್ಲಿ ಹರಿಯುತ್ತಿರುವ ಹಳ್ಳದಲ್ಲಿ ಎಸೆದಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿಯ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಸಿಕ್ಕಿರುವ ಹಿನ್ನೆಲೆಯಲ್ಲಿ ವ್ಯಕ್ತಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದು, ಮೃತ ದೇಹದ ವಾರಸುದಾರರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
