ಇತಿಹಾಸದಲ್ಲಿಯೇ ಮೊಟ್ಟ ಮೊದಲ ಭಾರಿಗೆ ಖಾಸಗಿ ರೈಲು ಆರಂಭ

Spread the love

ಚೆನೈ: ಭಾರತೀಯ ರೈಲ್ವೆ ಸೇವೆ ಆರಂಭವಾದ ಬಳಿಕ ಮೊದಲ ಬಾರಿಗೆ ಖಾಸಗಿ ಸಂಸ್ಥೆಗಳು ನಿರ್ವಹಿಸುವ ಪ್ರಯಾಣಿಕರ ರೈಲು ಸೇವೆ ಆರಂಭವಾಗಿದೆ. ದೇಶದ ಮೊದಲ ಖಾಸಗಿ ರೈಲು ಇದಾಗಿದೆ.
ಕೇಂದ್ರದ `ಭಾರತ್ ಗೌರವ್’ ಯೋಜನೆಯಡಿ ಚಾಲನೆಗೊಂಡ ಈ ರೈಲು ಕೊಯಮತ್ತೂರು ಮತ್ತು ಶಿರಡಿ ನಡುವೆ ಸಂಚರಿಸುತ್ತದೆ. ಜೂನ್ 14ರ ಸಂಜೆ ಕೊಯಮತ್ತೂರಿನಲ್ಲಿ ಖಾಸಗಿ ,ರೈಲುಸೇವೆಗೆ ಚಾಲನೆ ದೊರೆತಿದ್ದು, ರೈಲು ತಮಿಳುನಾಡಿನ ಕೊಯಮತ್ತೂರು ಉತ್ತರ ರೈಲು ನಿಲ್ದಾಣದಿಂದ ಶಿರಡಿ ನಡುವೆ ಸಂಚರಿಸುತ್ತದೆ.
ಶಿರಡಿಗೆ ತಲುಪುವ ಮೊದಲು, ರೈಲು ತಿರುಪುರ್, ಈರೋಡ್, ಸೇಲಂ ಜೋಲಾರ್‌ಪೇಟ್, ಬೆಂಗಳೂರು ಯಲಹಂಕ, ಧರ್ಮಾವರ, ಮಂತ್ರಾಲಯ ರಸ್ತೆ (ನಿಲುಗಡೆ), ಮತ್ತು ವಾಡಿಯಲ್ಲಿ ನಿಲ್ಲುತ್ತದೆ.
ದಕ್ಷಿಣ ರೈಲ್ವೇ ಮಜ್ದೂರ್ ಯೂನಿಯನ್‌ಗೆ ಸೇರಿದ ರೈಲ್ವೇ ನೌಕರರ ಗುಂಪು ಖಾಸಗಿ ರೈಲುಸೇವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಖಾಸಗಿ ರೈಲು ಸೇವೆ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯೋಜನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಖಾಸಗಿ ರೈಲಿನ ದರಗಳು ಭಾರತೀಯ ರೈಲ್ವೇಗಳು ವಿಧಿಸುವ ನಿಯಮಿತ ರೈಲು ಟಿಕೆಟ್ ದರಗಳಿಗೆ ಸಮನಾಗಿರುತ್ತದೆ ಮತ್ತು ಶಿರಡಿ ಸಾಯಿ ಬಾಬಾ ದೇವಸ್ಥಾನದಲ್ಲಿ ವಿಶೇಷ ವಿಐಪಿ ದರ್ಶನವನ್ನು ಒದಗಿಸುತ್ತದೆ.


Spread the love

About gcsteam

    Check Also

    ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರಾಂಕ್: ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಮಹತ್ವದ ಸಾಧನೆ

    Spread the loveಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. …

    Leave a Reply