ಹುಬ್ಬಳ್ಳಿ; ಧಾರವಾಡ ಜಿಲ್ಲೆಯ
ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಗೆ ಹಳ್ಳ ಉಕ್ಕಿ ಹರಿದಿದೆ. ಇದರಿಂದಾಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸುಮಾರು 150 ವಿದ್ಯಾರ್ಥಿಗಳು ಸಿಲುಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಬೆಳವಟಗಿ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ.
ಗುರುವಾರ ಸಂಜೆ ಸುಮಾರು 4 ಗಂಟೆಯಿಂದ ಆರಂಭವಾದ ಮಳೆಗೆ ತಾಲ್ಲೂಕಿನ ಅಮರಗೋಳ ದಲ್ಲಿ ಹಾದುಹೋಗುವ ಹಳ್ಳವೊಂದು ಉಕ್ಕಿ ಹರಿದಿದೆ. ಇದರಿಂದಾಗಿ ನೀರು ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಯ ಸುತ್ತಲು ಆವರಿಸಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳನ್ನು ಹೊರ ಬರದ ಹಾಗೆ ಸಿಬ್ಬಂದಿಗಳು ನೋಡಿಕೊಳ್ಳುತ್ತಿದ್ದು, ನೀರಿನ ಹರಿವು ಕಡಿಮೆಯಾದ ನಂತರ ವಿದ್ಯಾರ್ಥಿಗಳನ್ನು ಮನೆಗಳಿಗೆ ಕಳುಹಿಸಲಾಗುವುದು, ಅಲ್ಲಿಯವರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಶಾಲೆಯಲ್ಲಿಯೇ ಇರಿಸಲಾಗಿದೆ ಎಂದು ಬೆಳವಟಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶಿವಾನಂದ ಹಂಪಿಹೊಳಿ ತಿಳಿಸಿದ್ದಾರೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …