Breaking News

ಮುಸ್ಲಿಂ ಧರ್ಮಾಂಧತೆ, ಹಿಂಸಾಚಾರದ ಖಂಡಿಸಿ ವಿಎಚ್ ಪಿ ಪ್ರತಿಭಟನೆ

Spread the love

ಹುಬ್ಬಳ್ಳಿ: ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಂ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ನಗರದ ಮಿನಿ ವಿಧಾನಸೌಧದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಲಾಗುತ್ತಿದೆ. ಶ್ರೀರಾಮ ನವಮಿ ಮತ್ತು ಹನುಮ ಜಯಂತಿ ಅಂಗವಾಗಿ ನಡೆದ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಹಿಂದೂ ದೇವರುಗಳ ಮೆರವಣಿಗೆಯನ್ನು ನಡೆಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಮತ್ತು ಮುಖಂಡ ನವೀನ್ ಜಿಂದಾಲ್ ಅವರ ವಿವಾದಾತ್ಮಕ ಹೇಳಿಕೆ ನಂತರ, ಮುಸ್ಲಿಮರು ಹಿಂದೂಗಳ ಮನೆಗಳು, ಅಂಗಡಿಗಳು, ವಾಹನಗಳಿಗೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಸರ್ಕಾರಿ ಆಸ್ತಿ ಹಾಗೂ ದೇವಸ್ಥಾನಗಳಿಗೂ ಹಾನಿಯಾಗಿದೆ. ಪೊಲೀಸ್ ಪಡೆಗಳ ಮೇಲೂ ದಾಳಿ ನಡೆಸಲಾಯಿತು. ಹಲವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.
ನಂತರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಪರಿಷತ್‌ನ ಕೆ. ಗೋವರ್ಧನ ರಾವ್, ರಮೇಶ್ ಕದಂ, ಸುಭಾಸಸಿಂಗ ಜಮಾದಾರ, ವಿಜಯ ಕ್ಷೀರಸಾಗರ, ಸುಭಾಸ ಡಂಕ, ಆನಂದ ವಿಶ್ವನಾಥ ಮಠ, ಪ್ರಕಾಶ ಬಳ್ಳಾರಿ, ಚೇತನ ರಾವ, ರಘು ಯಲ್ಲಕ್ಕನವರ, ವಿವೇಕ ಮೋಕಾಶಿ, ಗಂಗಾಧರ ಶೆಟ್ಟರ ಹಾಗೂ ಚಂದ್ರಶೇಖರ ಗೋಕಾಕ ಇದ್ದರು.


Spread the love

About Karnataka Junction

[ajax_load_more]

Check Also

ಬಸ್ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Spread the loveಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ …

Leave a Reply

error: Content is protected !!