ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಮಲ್ಲೇಶ್ವರಂನ ಪಿಯುಸಿ ಬೋರ್ಡ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸುದ್ದಿಗೋಷ್ಠಿಯ ಮುಖ್ಯಾಂಶಗಳು:
ಬಾಲಕಿಯರು: ಶೇ.68.72 ಉತ್ತೀರ್ಣ.ಬಾಲಕರು: ಶೇ.55.22 ಉತ್ತೀರ್ಣ.ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ.ಗ್ರಾಮಾಂತರ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಉತ್ತಮ.ನಗರ ಪ್ರದೇಶದ ವಿದ್ಯಾರ್ಥಿಗಳ ಫಲಿತಾಂಶ 61.78.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಫಲಿತಾಂಶ 62.18.6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲಿ ಸ್ಥಾನ, ಉಡುಪಿ ಜಿಲ್ಲೆಗೆ 2ನೇ ಸ್ಥಾನ, ವಿಜಯಪುರಕ್ಕೆ ಮೂರನೇ ಸ್ಥಾನ, ಚಿತ್ರದುರ್ಗಕ್ಕೆ ಕೊನೆಯ ಸ್ಥಾನ.91,106 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ.ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟ.ಕನ್ನಡ ವಿಷಯದಲ್ಲಿ 563 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ.ಇಂಗ್ಲಿಷ್ ವಿಷಯದಲ್ಲಿ 2 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ.ಗಣಿತ ವಿಷಯದಲ್ಲಿ 14,200 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ.ಸೈನ್ಸ್ ವಿಭಾಗದ ವಿದ್ಯಾರ್ಥಿಗಳು ಹೆಚ್ಚು ಪಾಸ್ ಆಗಿದ್ದಾರೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …