ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದುಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1.45 ಕ್ಕೆ ಪ್ರಧಾನಿಯವರು ಕ್ಯಾಂಪಸ್ಗೆ ತೆರಳಿ, ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ, ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಹಾಗೂ ಮೇಲ್ದರ್ಜೆಗೇರಿಸಿದ 150 ಐಟಿಐಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮೈಸೂರಿಗೆ ತೆರಳಿದ್ದಾರೆ. ನಾಳೆ ಸಂಜೆ 5.30 ಕ್ಕೆ ಮೈಸೂರಿನ ಮಹಾರಾಜ ಮೈದಾನಕ್ಕೆ ತೆರಳಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ರಾತ್ರಿ 7 ಗಂಟೆಗೆ ಶ್ರೀ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ, ರಾತ್ರಿ 7.50 ಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಜೂನ್ 21 ರಂದು ಮಂಗಳವಾರ ಬೆಳಗ್ಗೆ 6.30 ಕ್ಕೆ ಪ್ರಧಾನಿ ಮೋದಿಯವರು ಮೈಸೂರು ಅರಮನೆಯ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಯೋಗಪಟುಗಳೊಂದಿಗೆ ಬೆರೆತು ಯೋಗ ಮಾಡಲಿದ್ದಾರೆ. ಬೆಳಗ್ಗೆ 8.10 ಕ್ಕೆ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.20 ಕ್ಕೆ ಮೈಸೂರು ಅರಮನೆ ಆವರಣದಿಂದ ನಿರ್ಗಮಿಸಿ, ಬೆಳಗ್ಗೆ 9.45ಕ್ಕೆ ಮೈಸೂರಿನ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಲಿದ್ದಾರೆ.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …