Breaking News

ಡಿಸೈಲ್, ಪೆಟ್ರೋಲ್ ನ್ನು ಜಿಎಸ್ ಟಿ ವ್ಯಾಪ್ತಿಗೆ ತರಲು ಹೊಸೂರಿನಲ್ಲಿ ಶಾಸಕ ಅಬ್ಬಯ್ಯಾ ಪ್ರಸಾದ್ ಆಗ್ರಹ

Spread the love

https://youtu.be/11uS0Na8fF4

ಹುಬ್ಬಳ್ಳಿ; ತೈಲ ಬೆಲೆ ಏರಿಕೆಯ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂಬ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಹೊಸೂರಿನಲ್ಲಿ ಪ್ರತಿಭಟನೆ ಮಾಡಿದರು.
ದಿನದಿಂದ ದಿನಕ್ಕೆ ತೈಲ ಬೆಲೆ
ಹೆಚ್ಚಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ರೀತಿಯ ಕಡಿವಾಣಕ್ಕೆ ಮುಂದಾಗುತಿಲ್ಲ.
ಪೆಟ್ರೋಲ್, ಡೀಸೆಲ್, ಜೆಟ್ ಇಂಧನ (ಎಟಿಎಫ್) ಹಾಗೂ ನೈಸರ್ಗಿಕ ಅನಿಲಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರುವ ಪ್ರಸ್ತಾವನೆ ಜಾರಿಯಾಗಿಲ್ಲ.
2017 ರಲ್ಲಿ ಜಿಎಸ್ ಟಿ ಜಾರಿಗೆ ತಂದಾಗ, 5 ತೈಲಗಳನ್ನು ಜಿಎಸ್ ಟಿ ವ್ಯಾಪ್ತಿಯಿಂದ ಹೊರಗೆ ಇಟ್ಟು, ರಾಜ್ಯ, ಕೇಂದ್ರ ಸರ್ಕಾರಗಳ ಆದಾಯಕ್ಕೆ ಇವುಗಳಿಂದ ದಾರಿ ಮಾಡಿಕೊಡಲಾಗಿತ್ತು‌ಎಂದು ಆರೋಪಿಸಲಾಯಿತು.
ತೈಲವನ್ನು ಜಿಎಸ್ ಟಿ ವ್ಯಾಪ್ತಿಗೆ ತರದೇ ಇರುವುದರಿಂದ ಪೆಟ್ರೋಲ್, ಡೀಸೆಲ್ ಮುಂತಾದವುಗಳ ಮೇಲೆ ಕೇಂದ್ರ ಸರ್ಕಾರ ಅಬಕಾರಿ ಸುಂಕ ವಿಧಿಸಲು ಅವಕಾಶವಿದ್ದರೆ, ವ್ಯಾಟ್ ನ್ನು(ಮೌಲ್ಯ ವರ್ಧಿತ ತೆರಿಗೆ) ವಿಧಿಸುವುದಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶವಿದೆ. ಈ ತೆರಿಗೆಗಳಿಂದಾಗಿ ತೈಲ ದರ ಗಗನಕ್ಕೇರುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಒಂದೆಡೆ ರಾಜ್ಯ, ಕೇಂದ್ರ ಸರ್ಕಾರಗಳು ಹಾಕುತ್ತಿರುವ ತೆರಿಗಳನ್ನು ಇಳಿಕೆ ಮಾಡುತ್ತಿಲ್ಲ ಮತ್ತೊಂದೆಡೆ, ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ. ತತ್ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ದರಗಳು ಸಾರ್ವಕಾಲಿಕ ದಾಖಲೆಯ ಏರಿಕೆ ಕಾಣುತ್ತಿದ್ದು, ಇವುಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂಬ ಒತ್ತಾಯ ಮಾಡಲಾಯಿತು. ಮುಖಂಡಾದ ರಜತ್ ಉಳ್ಳಾಗಡ್ಡಿಮಠ ಮುಂತಾದವರು ಭಾಗವಹಿಸಿದ್ದರು ‌


Spread the love

About gcsteam

    Check Also

    ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರಿಂದ ನಾಳೆ ಐಐಟಿಯಲ್ಲಿನ ಜ್ಞಾನ ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ ಉದ್ಘಾಟನೆ

    Spread the loveಧಾರವಾಡ ಫೆ.29: ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್‌ಕರ್ ಅವರು ನಾಳೆ ಮಾರ್ಚ್ 1, …

    Leave a Reply