ಕಡಬದ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್

Spread the love

ದಕ್ಷಿಣ ಕನ್ನಡ: ಕಡಬದ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ ಕಂಡುಬಂದ ಹಿನ್ನೆಲೆಯಲ್ಲಿ ಶಾಲೆಗೆ ಒಂದು ವಾರ ರಜೆ ಘೋಷಿಸಲಾಗಿದೆ. ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಶಾಲೆಗೆ ಭೇಟಿ ನೀಡಿ, ವರದಿ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಕಡಬದ ಶಿಕ್ಷಣ ಸಂಸ್ಥೆಯೊಂದರಲ್ಲಿ ಕೆಲ ದಿನಗಳ ಹಿಂದೆ ಕೆಲವು ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಚಿಕನ್ ಫಾಕ್ಸ್ ರೋಗವು ಇದೀಗ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹರಡಿದೆ ಎನ್ನಲಾಗಿದೆ.ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಬಿ, ಸುಮಾರು 40 ರಷ್ಟು ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ತಗುಲಿರುವ ವರದಿಯನ್ನು ತಾಲೂಕು ಆರೋಗ್ಯಾಧಿಕಾರಿಗಳು ನೀಡಿದ್ದು, ಇದು ಸೂಕ್ಷ್ಮ ವಿಚಾರವಾಗಿದೆ.ಒಬ್ಬರಿಂದ ಇನ್ನೊಬ್ಬರಿಗೆ ರೋಗ ಹರಡುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಒಂದು ವಾರಗಳ ಕಾಲ ರಜೆ ನೀಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply