ಮೂಲೆಗುಂಪಾದ ಪಾರ್ಕಿಂಗ್ ಸರ್ವೇ: ಮಹಾನಗರ ಪಾಲಿಕೆ ನೋಟಿಸ್ ಗೆ ಬೆಲೆ ಇಲ್ಲ

Spread the love

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿ ದಿನೇ ದಿನೇ ಬೆಳೆಯುತ್ತಿರುವ ನಗರಗಳಲ್ಲಿ ಪ್ರಮುಖ ಸಾಲಿನಲ್ಲಿ ನಿಲ್ಲುತ್ತದೆ. ಇಂತಹ ನಗರ ಇದೀಗ ಪಾರ್ಕಿಂಗ್ ಸಮಸ್ಯೆಯಿಂದ ದಿನನಿತ್ಯ ಜನರನ್ನು ಹೈರಾಣಾಗುವಂತೆ ಮಾಡಿದೆ. ಕಳೆದ 5 ವರ್ಷಗಳ ಹಿಂದೆ ಪಾಲಿಕೆ ಮಾಡಿದ್ದ ಸರ್ವೇ ಇದೀಗ ಮೂಲೆಗುಂಪಾಗಿದ್ದು ಜನರಿಗೆ ಪಾರ್ಕಿಂಗ್ ಜಾಗ ಹುಡುಕುವುದೇ ದೊಡ್ಡ ಸವಾಲಾಗಿದೆ.
ಹೀಗೆ ದೊಡ್ಡ ದೊಡ್ಡ ಬಿಲ್ಡಿಂಗ್ ಗಳ ಮುಂದೆ ನಿಂತಿರುವ ವಾಹನಗಳು, ಎಲ್ಲೂ ಜಾಗವೇ ಇಲ್ಲದೆ ಬಿಲ್ಡಿಂಗ್ ಗಳ ಮುಂದೆ, ರಸ್ತೆಯ ಪಕ್ಕದಲ್ಲೇ ನಿಂತಿರುವ ದ್ವಿಚಕ್ರ ವಾಹನಗಳು, ಹೀಗೆ ಸಿಕ್ಕ ಸಿಕ್ಕಲ್ಲಿ ವಾಹನಗಳು ನಿಲ್ಲುವುದಕ್ಕೆ ಪ್ರಮುಖ ಕಾರಣವೇ ಬೃಹತ್ ಕಟ್ಟಡಗಳು, ಮತ್ತು ಐಷಾರಾಮಿ ಹೋಟೆಲ್ ಗಳು. ಹೌದು..ವಾಣಿಜ್ಯ ನಗರಿ ಹುಬ್ಬಳ್ಳಿಯ ಸುಮಾರು 300ಕ್ಕೂ ಹೆಚ್ಚು ಬೃಹತ್ ಕಟ್ಟಡಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ. ಹೀಗಾಗಿ ಕಳೆದ 5 ವರ್ಷಗಳ ಹಿಂದೆಯೇ ಹುಬ್ಬಳ್ಳಿ ಧಾರವಾಡ
ಮಹಾನಗರ ಪಾಲಿಕೆ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಟ್ಟಡಗಳ ಸರ್ವೇ ಮಾಡುವ ಮೂಲಕ ಡೆಮಾಲಿಶ್ ಮಾಡುವ ಎಚ್ಚರಿಕೆಯನ್ನ ನೀಡಿತ್ತು. ಆದರೆ ಅಲ್ಲಿಂದ ಇಲ್ಲಿಯವರೆಗೆ ಈ ಯೋಜನೆ ಕೇವಲ ನೋಟಿಸ್ ಗೆ ಮಾತ್ರ ಸೀಮಿತವಾಗಿದೆ. ಇದರಿಂದಾಗಿ ಹುಬ್ಬಳ್ಳಿ ಧಾರವಾಡಅವಳಿನಗರದ ಸಾರ್ವಜನಿಕರು ಸಾರ್ವಜನಿಕ ವಲಯದಲ್ಲಿ ಪಾರ್ಕಿಂಗ್ ವ್ಯವಸ್ಥೆಗಾಗಿ ಪರದಾಡುವಂತಾಗಿದೆ.
ಇನ್ನೂ ಹುಬ್ಬಳ್ಳಿಯಲ್ಲಿ ಹಲವಾರು ವರ್ಷಗಳಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಅಲ್ಲದೇ ಪಾರ್ಕಿಂಗ್ ಗೆ ಸ್ಥಳವೇ ಇಲ್ಲದೆ ವಾಹನ ಸವಾರರಿಗೆ ವಾಹನಗಳನ್ನು ಪಾರ್ಕ್ ಮಾಡುವುದೇ ದೊಡ್ಡ ಸವಾಲಾಗಿದೆ. ಇನ್ನೂ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಸ್ತೆಗಳ ಕಾರ್ಯ ನಡೆಯುತ್ತಿದ್ದು, ವಾಹನ ಓಡಾಟವೇ ನಗರದಲ್ಲಿ ಕಷ್ಟ ಸಾಧ್ಯವಾಗಿದೆ. ಅಲ್ಲದೆ ದೊಡ್ಡ ದೊಡ್ಡ ಕಟ್ಟಡಗಳ ಕೆಳಗೆ ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿದ್ದರೂ ಸಹ 300ಕ್ಕೂ ಹೆಚ್ಚು ಕಟ್ಟಡಗಳಲ್ಲಿ ಗಾಡಿಗಳನ್ನ ಪಾರ್ಕ್ ಮಾಡೋಕೆ ಜಾಗವೇ ಇಲ್ಲದಾಗಿದೆ. ಹಿಂದೆ ಕೊಟ್ಟ ಪಾಲಿಕೆಯ ನೋಟಿಸ್ ಗೂ ಸಹ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದ್ದು, ಪಾಲಿಕೆ ಸರ್ವೇ ಕಾರ್ಯವೇ ಸಂಪೂರ್ಣ ಕಾಲಹರಣ ಎನ್ನುವಂತಾಗಿದೆ.
ಒಟ್ಟಾರೆ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಪಾರ್ಕಿಂಗ್ ನದ್ದೇ ದೊಡ್ಡ ಸವಾಲಾಗಿದ್ದು, ಪಾರ್ಕ್ ಮಾಡೋಕೆ ಜಾಗವನ್ನ ಪಾಲಿಕೆ ನಿಗದಿ ಸಹ ಪಡಿಸಿಲ್ಲ. ಇನ್ನು ಕೇವಲ ಬೀದಿ ಬದಿ ವ್ಯಾಪರಸ್ತರ ಮೇಲೆ ದರ್ಪ ತೋರಿಸುವ ಪಾಲಿಕೆ ಅಧಿಕಾರಿಗಳು ಇನ್ನಾದ್ರೂ ದೊಡ್ಡ ದೊಡ್ಡ ಕಟ್ಟಡಗಳ ಮಾಲೀಕರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ. ಇಲ್ಲದಿದ್ರೆ ಪಾರ್ಕಿಂಗ್ ಗಾಗಿಯೇ ಜನರು ಸ್ಥಳ ಹುಡುಕುವ ಸ್ಥಿತಿ ಮತ್ತೆ ಹೆಚ್ಚಾಗಲಿರೋದಂತೂ ಸತ್ಯ.


Spread the love

About gcsteam

    Check Also

    ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರಾಂಕ್: ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಮಹತ್ವದ ಸಾಧನೆ

    Spread the loveಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. …

    Leave a Reply