ಹುಬ್ಬಳ್ಳಿ: ‘ರಾಜ್ಯ ಸೋಮವಂಶೀಯ ಸಹಸ್ರಾರ್ಜುನ ಕ್ಷತ್ರಿಯ ಸಮಾಜದಿಂದ ಜೂನ್ 25ರಂದು ಬೆಳಿಗ್ಗೆ 11ಕ್ಕೆ ಗೋಕುಲ ರಸ್ತೆಯ ಕ್ಯೂಬಿಕ್ಸ್ ಹೋಟೆಲ್‌ನಲ್ಲಿ ರಾಜ್ಯಮಟ್ಟದ ಯುವ ಸಮಾವೇಶ ಆಯೋಜಿಸಲಾಗಿದೆ’ ಎಂದು ಎಸ್‌ಎಸ್‌ಕೆ ಸಮಾಜದ ಅಧ್ಯಕ್ಷ ಅಶೋಕ ಕಾಟವೆ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಸಮಾಜದ 500ಕ್ಕೂ ಹೆಚ್ಚು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಜಗದೀಶ ಶೆಟ್ಟರ್, ಅರವಿಂದ ಬೆಲ್ಲದ, ಶ್ರೀನಿವಾಸ ಮಾನೆ, ಪ್ರಸಾದ ಅಬ್ಬಯ್ಯ ಪಾಲ್ಗೊಳ್ಳುವರು’ ಎಂದು ಹೇಳಿದರು.
ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಸಮಾಜದ ಧರ್ಮದರ್ಶಿ ನೀಲಕಂಠ ಜಡಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಾಳು ಮಗಜಿಕೊಂಡಿ, ಸಂಘಟನಾ ಕಾರ್ಯದರ್ಶಿ ಗೋಪಾಲ ಬದ್ದಿ, ನಾರಾಯಣ ನಿರಂಜನ, ಎನ್.ಎಂ. ಕೊಡೆ, ಡಿ.ಕೆ. ಚವ್ಹಾಣ, ಸತೀಶ ಬೆರವಾಡೆ ಇದ್ದರು.
