ಸಾರ್ವಜನಿಕ ಸ್ಥಳಗಳಲ್ಲಿ ಜಾತಿ ಬಗ್ಗೆ ನಿಂದನೆ ಮಾಡಿದರಷ್ಟೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅನ್ವಯ

Spread the love

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅನ್ವಯದ ಬಗ್ಗೆ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜಾತಿ ಬಗ್ಗೆ ನಿಂದನೆ ಮಾಡಿದರೆ ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಿದೆ.
ಜಯಕುಮಾರ್ ನಾಯರ್ ಅವರು ತಮ್ಮ ವಿರುದ್ಧ ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣ ರದ್ದುಪಡಿಸಬೇಕೆಂದು ಕೋರಿ ಮಂಗಳೂರಿನ ರಿತೇಶ್ ಪಯಾಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್​ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.ಕಟ್ಟಡದ ನೆಲಮಹಡಿಯು ಸಾರ್ವಜನಿಕ ಸ್ಥಳವಾಗಿರುವುದಿಲ್ಲ, ನೆಲಮಹಡಿಯನ್ನು ಸಾರ್ವಜನಿಕರು ಯಾರೂ ಹೆಚ್ಚಾಗಿ ವೀಕ್ಷಿಸಿವುದಿಲ್ಲ. ಹಾಗಾಗಿ, ಅಲ್ಲಿಂದ ಬಯ್ಯುವುದು ಅಥವಾ ನಿಂದನೆ ಮಾಡಿದರೆ ಅದು ಪರಿಶಿಷ್ಟ ಜಾತಿ, ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ತೀರ್ಪಿನಲ್ಲಿ ತಿಳಿಸಿದ್ದಾರೆ.
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಿತೇಶ್ ಪಯಾಸ್ ಮತ್ತು ಜಯಕುಮಾರ್ ನಾಯರ್ ನಡುವೆ ವ್ಯಾಜ್ಯ ನಡೆಯುತ್ತಿತ್ತು. ಎರಡು ವರ್ಷಗಳ ಹಿಂದೆ ಕಟ್ಟಡದ ನೆಲಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮೋಹನ್ ಎನ್ನುವರು ತಮ್ಮ ಬಗ್ಗೆ ಜಾತಿನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಜಯಕುಮಾರ್ ನಾಯರ್ ಅಟ್ರಾಸಿಟಿ ಕಾಯ್ದೆಯಡಿ ದೂರು ನೀಡಿದ್ದರು.ಈ ಪ್ರಕರಣದ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಹೈಕೋರ್ಟ್ , ನೆಲಮಹಡಿ ಸಾರ್ವಜನಿಕ ವೀಕ್ಷಣೆಯ ಸ್ಥಳವಲ್ಲ. ಹೀಗಾಗಿ, ಎಸ್​ಸಿ ಮತ್ತು ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಸೆ. 3(1)(ಆರ್)(ಎಸ್)(ವಿಎ) ಅನ್ವಯವಾಗುವುದಿಲ್ಲ ಎಂದು ಅಭಿಪ್ರಾಯಿಸಿ ರಿತೇಶ್ ಪಯಾಸ್ ವಿರುದ್ಧ ದಾಖಲಿಸಿದ್ದ ಮೊಕದ್ದಮೆ ರದ್ದುಪಡಿಸಿದೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply