ದೆಹಲಿ ಭೇಟಿ ರಾಜಕೀಯ ಉದ್ದೇಶ ಇಲ್ಲ : ಅರವಿಂದ ಬೆಲ್ಲದ

Spread the love

ಧಾರವಾಡ : ದೆಹಲಿ ಭೇಟಿ ರಾಜಕೀಯ ಉದ್ದೇಶ ಇಲ್ಲ ನಾನು ನಮ್ಮ ಖಾಸಗಿ ಕುಟುಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು , ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದ ಖಾತೆ ಮೂಲಕ ಸ್ಪಷ್ಟನೆ ನೀಡಿದ ಅರವಿಂದ ಬೆಲ್ಲದ ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಿಯಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ . ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದರು. ಹೀಗಾಗಿ ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ತಮ್ಮ ಜಾಲತಾಣಗಳ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


Spread the love

Leave a Reply

error: Content is protected !!