ಅಪಹರಣ ಆರೋಪ- ಕಾರ್ಪೊರೇಟರ್‌ ವಿರುದ್ಧ ಪ್ರಕರಣ ದಾಖಲು

Spread the love

ಹುಬ್ಬಳ್ಳಿ: ತನ್ನ ಪತ್ನಿ ಸಹ್ನಾ ಹಿರೆಕೇರೂರ ಅವರನ್ನು, ಅವರ ತಂದೆ, ತಾಯಿ ಹಾಗೂ ಚಿಕ್ಕಪ್ಪನ ಮಗನಾದ ಮಹಾನಗರ ಪಾಲಿಕೆ ಸದಸ್ಯ ಚೇತನ ಹಿರೇಕೆರೂರ ಅವರು ಅಪಹರಣ ಮಾಡಿದ್ದಾರೆ‌ ಎಂದು ಪತಿ ನಿಖಿಲ್‌ ದಾಂಡೇಲಿ ಗೋಕುಲ ರಸ್ತೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
‘2021ರ ನವೆಂಬರ್‌ನಲ್ಲಿ ಕುಂದಗೋಳದ ನೋಂದಣಿ ಕಚೇರಿಯಲ್ಲಿ ವಿವಾಹವಾಗಿದ್ದು, ಇದೇ 26ರಂದು ನಗರದ ಗೋಕುಲ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಆರತಕ್ಷತೆ ಇಟ್ಟುಕೊಳ್ಳಲಾಗಿತ್ತು. ಪತ್ನಿಯ ತಂದೆ ಶಿವು ಹಿರೇಕೆರೂರ ಮತ್ತು ತಾಯಿ ಜಯಲಕ್ಷ್ಮಿ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಬರುವಂತೆ ಒಪ್ಪಿಸಲು, ಶುಕ್ರವಾರ ಬೆಳಿಗ್ಗೆ ಗೋಕುಲ ರಸ್ತೆಯ ಅಕ್ಷಯ ಪಾರ್ಕ್‌ನ ಬಾಟಾ ಷೋರೂಂ ಬಳಿ ಬಂದಾಗ, ಚೇತನ ಅವರು ಒಂದು ತಾಸಿನಲ್ಲಿ ಕಳುಹಿಸಿಕೊಡುವುದಾಗಿ ಪತ್ನಿಯನ್ನು ಕರೆದುಕೊಂಡು ಹೋಗಿದ್ದರು. ಒಂದು ತಾಸಿನ ನಂತರ ಪತ್ನಿ ಮರಳಿ ಬರದ ಹಿನ್ನೆಲೆಯಲ್ಲಿ ಅವಳ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ಡ್‌ ಆಫ್‌ ಆಗಿತ್ತು. ಪತ್ನಿಯ ತಂದೆ–ತಾಯಿ ಹಾಗೂ ಚೇತನ ಅವಳನ್ನು ಅಪಹರಿಸಿದ್ದಾರೆ’ ಎಂದು ನಿಖಿಲ್‌ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣದ ತನಿಖೆಗಾಗಿ ಇನ್‌ಸ್ಪೆಕ್ಟರ್‌ ಜೆ.ಎಂ. ಕಾಲಿಮಿರ್ಚಿ, ಆರೋಪಿ ಚೇತನ ಹಿರೇಕೆರೂರ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಚೇತನ ಹಿರೇಕೆರೂರ ಹಿಂಬಾಲಕರು ಪೊಲೀಸ್‌ ಠಾಣೆ ಮುತ್ತಿಗೆ ಹಾಕಿ ಚೇತನ ಬಿಡುಗಡೆಗೆ ಆಗ್ರಹಿಸಿದರು.
‘ಪಾಲಿಕೆ ಸದಸ್ಯನಾದ ಬಳಿಕೆ ಚೇತನ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬಡಾವಣೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಿ, ನೆಮ್ಮದಿಯ ಜೀವನಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅಂತಹ ವ್ಯಕ್ತಿ ತನ್ನದೇ ಕುಟುಂಬದ ಯುವತಿಯನ್ನು ಅಪಹರಣ ಮಾಡುತ್ತಾರೆ ಎಂದರೆ ಯಾರೂ ನಂಬುವುದಿಲ್ಲ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು. ಈ ನಡುವೆ
‘ಚೇತನ ವಿರುದ್ಧ ಪ್ರಕರಣ ದಾಖಲಾಗಿದೆ.


Spread the love

About gcsteam

    Check Also

    ಸಿದ್ದರಾಮಯ್ಯ ಹೇಳಿಲ್ವಾ ಫ್ರೀ ಎಂದು, ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಗ್ರಾಮಸ್ಥರು

    Spread the loveಹುಬ್ಬಳ್ಳಿ:  ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಇಸ್ಕಾಂ ಸಿಬ್ಬಂದಿಯ …

    Leave a Reply