ಮುಂಗೈ;
ಶಿವಸೇನೆ ಮುಖ್ಯಸ್ಥ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾವಿಕಾಸ್ ಆಘಾಡಿ ಸರ್ಕಾರದ ವಿರುದ್ಧ ಬಂಡಾಯ ಸಾರಿ ಏಕನಾಥ ಶಿಂದೆ ಸೋಮವಾರ ರಾತ್ರಿ ಶಾಸಕರೊಂದಿಗೆ ಗುಜರಾತ್ಗೆ ತೆರಳಿದ್ದರು. ಅಲ್ಲಿಂದ ಅಸ್ಸೋಂದ ಗುವಾಹಟಿಗೆ ತೆರಳಿ ಅಲ್ಲಿ ಬೀಡು ಬಿಟ್ಟಿದ್ದಾರೆ. ಆದರೆ, ಇದೀಗ ಗುಜರಾತ್‌ನಲ್ಲಿ ಪ್ರತಿಪಕ್ಷದ ನಾಯಕರೂ ಆದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಮತ್ತು ಏಕನಾಥ ಶಿಂದೆ ಮಧ್ಯೆ ರಹಸ್ಯ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.ಏಕನಾಥ್ ಶಿಂದೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬರೋಡಾಗೆ ಒಬ್ಬರೇ ಬಂದಿದ್ದರು. ಇಲ್ಲಿ ಫಡ್ನವೀಸ್ ಅವರನ್ನು ಭೇಟಿಯಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ಸ್ಥಾಪನೆ ಕುರಿತು ಚರ್ಚಿಸಿದ್ದಾರೆ. ಅಲ್ಲದೇ, ಅಧಿಕೃತ ಮೂಲಗಳ ಪ್ರಕಾರ, ಏಕನಾಥ್ ಶಿಂದೆ ಮತ್ತು ದೇವೇಂದ್ರ ಫಡ್ನವಿಸ್ ಒಂದೇ ವಾರದಲ್ಲಿ ಎರಡು ಬಾರಿ ಭೇಟಿಯಾಗಿದ್ದಾರೆ ಎಂದು ಹೇಳಲಾಗ್ತಿದೆ.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …