ಹುಬ್ಬಳ್ಳಿ ತಾಲೂಕಿನ ದೇವರ ಗುಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರಿಯಾಗಿ ಬಸ್ ಬಿಡುತಿಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ದೇವರ ಗುಡಿಹಾಳ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ಮಾಡಿದರು. ದೇವರಗುಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಪರಸಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳು, ಸಾರ್ವಜನಿಕರು ಸರಿಯಾಗಿ ಮತ್ತು ಸಮಯಕ್ಕೆ ಅನುಸಾರವಾಗಿ ಬಸ್ ಬರುತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಶಾಲೆ ಕಾಲೇಜುಗಳಿಗೆ ಹೊಗುವುದಕ್ಕೆ ತೀವ್ರ ತೊಂದರೆ ಆಗುತ್ತಿದೆ. ಸಾಕಷ್ಟು ಸಲ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಅಧಿಕಾರಿಗಳ ಗಮನ ಸಹ ಸೆಳೆಯಲಾಗಿದೆ.ಆದರೆ ಇದಕ್ಕೆ ಯಾವುದೇ ಸ್ಪಂದನೆಯಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
Check Also
25 ರಂದು ಗಂಗಾ ಸೊಸೈಟಿ ರಜತ ಮಹೋತ್ಸವ
Spread the loveಹುಬ್ಬಳ್ಳಿ: ಇಲ್ಲಿನ ಹಳೇ ಕೋರ್ಟ್ ಸರ್ಕಲ್ ರಸ್ತೆಯ ರೇವಣಕರ ಕಾಂಪ್ಲೆಕ್ಸ್‌ನಲ್ಲಿರುವ ಗಂಗಾ ಕೋ-ಆಪ್ ಕ್ರೆಡಿಟ್ ಸೊಸೈಟಿಯ ರಜತ …