ಆಂಧ್ರ ಪ್ರದೇಶ : ಚಲಿಸುತ್ತಿದ್ದ ಆಟೋ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಐದು ಮಂದಿ ಸಜೀವ ದಹನವಾಗಿರುವ ಘಟನೆ ಶ್ರೀ ಸತ್ಯಸಾಯಿ ಜಿಲ್ಲೆಯ ತಾಡಿಮರ್ರಿ ವಲಯದಲ್ಲಿ ನಡೆದಿದೆ.
ಗುಡಂಪಲ್ಲಿಯಿಂದ ಚಿಲ್ಲಕೊಂಡಯ್ಯಪಲ್ಲಿಗೆ ಇಂದು ಬೆಳಗ್ಗೆ 5 ಮಂದಿ ಕೃಷಿ ಕೆಲಸಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ಹೈಟೆನ್ಷನ್ ವಿದ್ಯುತ್ ತಂತಿ ಕಟ್ಟಾಗಿ ಬಿದ್ದಿದೆ. ಪರಿಣಾಮ ಒಮ್ಮೆಲೆ ಆಟೋಗೆ ಬೆಂಕಿ ಹೊತ್ತಿಕೊಂಡಿದ್ದು, 5 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಮೃತರನ್ನು ಗುಡ್ಡಂಪಲ್ಲಿ ನಿವಾಸಿಗಳು ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಆಟೋ ಚಾಲಕ ಪೋತುಲಯ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಲಕ್ಷ್ಮಿ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಟ್ಟಲಪಲ್ಲಿ ಆರ್ ಟಿಡಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಕಣ್ಣೆದುರೇ ಬೆಂಕಿ ಹೊತ್ತಿಕೊಂಡಿದ್ದರಿಂದ ಸ್ಥಳೀಯರು ಓಡಿ ಬಂದರೂ ರಕ್ಷಿಸಲಾಗಲಿಲ್ಲ. ತಕ್ಷಣ ಆಂಬ್ಯುಲೆನ್ಸ್‌ಗೆ ಮಾಹಿತಿ ನೀಡಿದರೂ ಇವರೆಲ್ಲರ ಪ್ರಾಣ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.