Breaking News

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ- ಮತಕೇಂದ್ರಗಳಿಗೆ ಡಿಸಿ ಭೇಟಿ

Spread the love

ಹುಬ್ಬಳ್ಳಿ; ಭಾರೀ ಕದನ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಳೆ ಜೂನ್ 13 ರಂದು ಮತದಾನ ನಡೆಯಲಿದ್ದು . ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ‌. ನಗರದ ವಿವಿಧ ಮತಕೇಂದ್ರಗಳಿಗೆ ಪೂರ್ವ ತಯಾರಿ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ಪರಿಶೀಲನೆ ಮಾಡಿದರು. ಈ ಕುರಿತು ಡಿಟೇಲ್ಸ್ ಇದೆ ನೋಡಿ.
ಹುಬ್ಬಳ್ಳಿ ಧಾರವಾಡ ಸೇರಿದಂತೆಜಿಲ್ಲೆಯಲ್ಲಿ 21 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಜಿಲ್ಲೆಯಲ್ಲಿ 6445 ಒಟ್ಟು ಮತದಾರರಿದ್ದಾರೆ. ಅವರಲ್ಲಿ 3450 ಪುರುಷ ಹಾಗೂ 2995 ಮಹಿಳಾ ಮತದಾರರಾಗಿದ್ದಾರೆ. ಜಿಲ್ಲೆಯ ಮತಗಟ್ಟೆಗಳ ಸಂಖ್ಯೆ, ಸ್ಥಳ ಮಾಹಿತಿ ಇಲ್ಲಿದೆ ನೋಡಿ.ಧಾರವಾಡ ನಗರ, ಧಾರವಾಡ ಗ್ರಾಮಾಂತರ, ಹುಬ್ಬಳ್ಳಿ ಶಹರ, ಹುಬ್ಬಳ್ಳಿ ಗ್ರಾಮಾಂತರ ‌ನವಲಗುಂದ,‌ಕಲಘಟಗಿ, ಕುಂದಗೋಳ, ನವಲಗುಂದ, ಅಳ್ನಾವರ, ಅಣ್ಣಿಗೇರಿಗಳಲ್ಲಿ ಮತಕೇಂದ್ರ ಸ್ಥಾಪನೆ ಮಾಡಲಾಗಿದೆ.‌
ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಕೇಂದ್ರಗಳಿಲ್ಲಿ ನಿಗಾ ಇರಿಸಲಾಗಿದೆ ಎಂದರು.


Spread the love

About Karnataka Junction

[ajax_load_more]

Check Also

ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ

Spread the love  ಹುಬ್ಬಳ್ಳಿ: ‘ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ …

Leave a Reply

error: Content is protected !!