ಅತ್ತಿಗೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ನಾದಿನಿ

Spread the love

ಮಂಡ್ಯ: ನಾದಿನಿಯೇ ಅತ್ತಿಗೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕು ಕಂಬದಹಳ್ಳಿಯಲ್ಲಿ ನಡೆದಿದೆ.
ಪ್ರಿಯಾಂಕ (32) ನಾದಿನಿಯಿಂದ ಕೊಲೆಯಾದ ಅತ್ತಿಗೆ. ಗಿರಿಜಾ (31) ಅತ್ತಿಗೆಯನ್ನ ಕೊಂದು ತಾನೂ ನೇಣಿಗೆ ಶರಣಾಗಿದ್ದಾಳೆ ನಾದಿನಿ. ಕೌಟುಂಬಿಕ ಕಲಹದಿಂದ ಅತ್ತಿಗೆ-ನಾದಿನಿ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರೂ ಜಗಳವಾಡಿದ್ದಾರೆ. ಈ ವೇಳೆ ಜಗಳ ಅತಿರೇಕಕ್ಕೆರಿದಾಗ ನಾದಿನಿಯೇ ಅತ್ತಿಗೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ. ನಂತರ ಕೊಲೆ ಪ್ರಕರಣದಲ್ಲಿ ತನ್ನನ್ನು ಬಂಧಿಸುತ್ತಾರೆ ಎಂಬ ಭಯದಿಂದ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

Leave a Reply

error: Content is protected !!