ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಲೋಗೊ ಕರ್ನಾಟಕದ ಕೈ ತಪ್ಪಿ, ಕೇರಳ ಪಾಲಾಗಿದೆ. ಕೆಎಸ್ಆರ್ಟಿಸಿ- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಎಂಬ ಹೆಸರಿನಲ್ಲಿ ಕರ್ನಾಟಕದ ಸಾರಿಗೆ ಬಸ್ಗಳು ಸಂಚರಿಸುತ್ತಿದ್ದವು. ಜೊತೆಗೆ, ಕೇರಳ ರಾಜ್ಯದಲ್ಲೂ ಕೆಎಸ್ಆರ್ಟಿಸಿ ಎಂಬ ಅದೇ ಹೆಸರಿನಲ್ಲಿ ಬಸ್ಗಳ ಸಂಚಾರ ನಡೆಯುತ್ತಿತ್ತು. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಹೆಸರಿನಲ್ಲಿ ಅಲ್ಲಿನ ಬಸ್ಗಳು ಸಂಚಾರ ಮಾಡುತ್ತಿದ್ದವು.
ಎರಡೂ ರಾಜ್ಯದ ಸಾರಿಗೆ ಬಸ್ಗಳು ‘ಕೆಎಸ್ಆರ್ಟಿಸಿ’ ಎಂಬ ಒಂದೇ ಟ್ರೇಡ್ ಮಾರ್ಕ್ ಬಳಸುತ್ತಿದ್ದವು. 2014ರಲ್ಲಿ ಈ ಟ್ರೇಡ್ ಮಾರ್ಕ್ ಬಳಸದಂತೆ ಕೇರಳಕ್ಕೆ ಕರ್ನಾಟಕ ಸೂಚನೆ ನೀಡಿತ್ತು. ಈ ಬಗ್ಗೆ ಕೇರಳಕ್ಕೆ ನೋಟಿಸ್ ಕೂಡ ಜಾರಿ ಮಾಡಿತ್ತು. ಅಷ್ಟೇ ಅಲ್ಲದೆ, ಕೇರಳ ಸರ್ಕಾರ ಟ್ರೇಡ್ ಮಾರ್ಕ್ಗಳ ರಿಜಿಸ್ಟ್ರಾರ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು.
ಕೇರಳ ಸರ್ಕಾರ ಆ ಸಂದರ್ಭ ಟ್ರೇಡ್ ಮಾರ್ಕ್ಗಳ ರಿಜಿಸ್ಟ್ರಾರ್ಗೆ ಅರ್ಜಿ ಸಲ್ಲಿಸಿತ್ತು. ಸುದೀರ್ಘ 8 ವರ್ಷಗಳಿಂದ ನಡೆದಿದ್ದ ಕಾನೂನು ಹೋರಾಟ ನಡೆದಿತ್ತು. ಕೊನೆಗೆ ಅಂತಿಮವಾಗಿ ಕೇರಳಕ್ಕೆ ಈ ಟ್ರೇಡ್ಮಾರ್ಕ್ ಲಭಿಸಿದೆ. ಕೆಎಸ್ಆರ್ಟಿಸಿ ಟ್ರೇಡ್ ಮಾರ್ಕ್ ಕೇರಳ ರಾಜ್ಯಕ್ಕೆ ಒಲಿದ ಬಗ್ಗೆ ಕೇರಳ ರಸ್ತೆ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.