ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇಬ್ಬರು ಕೈದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಓರ್ವ ಕೈದಿಗೆ ಇನ್ನೋರ್ವ ಕೈದಿ ಟೈಲ್ಸ್ನ್ನೇ ಚಾಕು ರೀತಿ ಬಳಕೆ ಮಾಡಿ ಇರಿದಿರುವ ಘಟನೆ ನಡೆದಿದೆ.
ಸುಲೇಮಾನ್ ಎಂಬ ಕೈದಿಯೇ ಇದೀಗ ಇರಿತಕ್ಕೆ ಒಳಗಾದ ಕೈದಿ. ಪಚ್ಚಿ ಎಂಬ ಇನ್ನೋರ್ವ ಕೈದಿ ಸುಲೇಮಾನ್‌ಗೆ ಟೈಲ್ಸ್‌ನಿಂದ ಇರಿದಿದ್ದಾನೆ. ಉಡುಪಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಚ್ಚಿ ಎಂಬಾತ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾನೆ.ಸುಲೇಮಾನ್ ಎಂಬಾತ ಬೆಂಗಳೂರು ಮಲ್ಲೇಶ್ವರಂನ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾನೆ. ಪಚ್ಚಿ ಎಂಬಾತ ಈ ಹಿಂದೆ ಶಿವಮೊಗ್ಗ ಜೈಲಿನಲ್ಲಿದ್ದ. ಅಲ್ಲೂ ಇದೇ ರೀತಿ ಹಲ್ಲೆ ಮಾಡಿದ್ದಕ್ಕೆ ಪಚ್ಚಿಯನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿತ್ತು.
ಧಾರವಾಡಕ್ಕೆ ಬಂದ ಮೇಲೆ ಪಚ್ಚಿ ಎಂಬ ಈತ ಮೂರನೇ ಬಾರಿ ಹಲ್ಲೆ ಮಾಡಿದ್ದಾನೆ. ಕಳೆದ ನಾಲ್ಕು ತಿಂಗಳ ಹಿಂದೆ ಧಾರವಾಡ ಜೈಲು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಎಂದು ಗೊತ್ತಾಗಿದೆ. ಇಂದು ಕ್ಷುಲ್ಲಕ ಕಾರಣಕ್ಕಾಗಿ ಪಚ್ಚು ಸುಲೇಮಾನ್ ಎಂಬಾತನ ಮೇಲೆ ಮತ್ತೆ ಹಲ್ಲೆ ಮಾಡಿದ್ದಾನೆ.ಸದ್ಯ ಘಟನಾ ಸ್ಥಳಕ್ಕೆ ಎಸಿಪಿ ಬಸವರಾಜ್ ಹಾಗೂ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಚ್ಚಿ ಎಂಬಾತನ ಮೇಲೆ ಉಪನಗರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Check Also
ಕೊರವಿ ಡೆವಲಪರ್ಸ್ ವತಿಯಿಂದ ನ. 17 ರಂದು ಕೊರವಿ ಗ್ರೀನ್ ಸಿಟಿ’ ಭೂಮಿ ಪೂಜೆ ಸಮಾರಂಭ
Spread the loveಹುಬ್ಬಳ್ಳಿ : ನಗರದ ಕೊರವಿ ಡೆವಲಪರ್ಸ್ ವತಿಯಿಂದ ನ. 17 ರಂದು ಬೆಳಗ್ಗೆ 10.30ಕ್ಕೆ ಧಾರವಾಡದ ಗರಗ …