ಹುಬ್ಬಳ್ಳಿ: ಇದೇ ತಿಂಗಳು ೨೦ರಿಂದ ೨೪ರವರೆಗೆ ಗದುಗಿನ ಗಜೇಂದ್ರಗಡ ತಾಲ್ಲೂಕಿನ ಬೊಮ್ಮಸಾಗರ ಗ್ರಾಮದಲ್ಲಿ ನಡೆಯುವ ದುರ್ಗಾದೇವಿ ಜಾತ್ರೆಯಲ್ಲಿ ಕೋಣ, ಕುರಿ ಬಲಿ ಕೊಡುವುದನ್ನು ತಡೆಯಲು ಜಿಲ್ಲಾಡಳಿತ ಮುಂದಾಗಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಆಗ್ರಹಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಈಗಾಗಲೇ ಪ್ರಾಣಿಬಲಿ ತಡೆಯುವಂತೆ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಆದೇಶಿಸಿದೆ. ಅಷ್ಟಾದರೂ ಅಲ್ಲಿ ಪ್ರಾಣಿಬಲಿ ನಡೆದರೆ, ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.ದೇವವಸ್ಥಾನದ ಸುತ್ತಲಿನ ಗ್ರಾಮಗಳ ಗಡಿಗಳಲ್ಲಿ ಜಿಲ್ಲಾಡಳಿತ ಚೆಕ್‌ಪೋಸ್ಟ್‌ಗಳನ್ನು ಹಾಕಿ, ಪ್ರಾಣಿಗಳನ್ನು ಕೊಂಡೊಯ್ಯದಂತೆ ತಡೆಯಬೇಕು. ಇದಕ್ಕಾಗಿ ಕನಿಷ್ಠ ೧೦೦೦ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು.
ಜಾತ್ರೆ ವೇಳೆ ನಡೆಯುತ್ತಿರುವ ಪ್ರಾಣಿ ಬಲಿ ತಡೆಯಲು ಜಾಗೃತಿ ಮೂಡಿಸಲು ಹುಬ್ಬಳ್ಳಿಯಿಂದ ದುರ್ಗಾದೇವಿ ದೇವಸ್ಥಾನದವರೆಗೆ ‘ಅಹಿಂಸಾ ಪ್ರಾಣಿ ದಯಾ ಅಧ್ಯಾತ್ಮ ಸಂದೇಶ ಯಾತ್ರೆಹಮ್ಮಿಕೊಂಡಿದ್ದೇವೆ. ರಾಜ್ಯದ ವಿವಿಧೆಡೆ ನಡೆಯುವ ಜಾತ್ರೆಗಳಲ್ಲಿ ಸುಮಾರು ಒಂದೂವರೆ ಕೋಟಿಯಷ್ಟು ವಿವಿಧ ಪ್ರಾಣಿಗಳ ಬಲಿ ಆಗುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಪ್ರಾಣಿಬಲಿ ತಡೆಯಬೇಕು’ ಎಂದು ಒತ್ತಾಯಿಸಿದರು.
Tags #animals #god #cow #festival #dharwad #india #karnataka #trending #trend #animal #god
[ajax_load_more]Check Also
*ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಹೈ ಅಲರ್ಟ್: ಈದ್ಗಾ ಮೈದಾನದಲ್ಲಿ ಪೊಲೀಸ್ ಪರೇಡ್*
Spread the loveಹುಬ್ಬಳ್ಳಿ: ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ …