Breaking News

ತಾಯಿ, ಮಕ್ಕಳ ಸಾವಿಗೆ ಬಿಗ್ ಟ್ವಿಸ್ಟ್: ಗಂಡ, ಅತ್ತೆ ಹಾಗೂ ಮಾವನ ಮೇಲೆ ಎಫ್‌ಐಆರ್

Spread the love

ಧಾರವಾಡ: ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದ ತಾಯಿ, ಮಕ್ಕಳ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಮೊರಬ ಗ್ರಾಮದ ಸಾವಿತ್ರಿ ಸರಕಾರ ಎಂಬ ಮಹಿಳೆ ತನ್ನ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವನ್ನು ಹತ್ಯೆ ಮಾಡಿ ಕೊನೆಗೆ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿತ್ರಿಯ ಗಂಡ, ಅತ್ತೆ ಹಾಗೂ ಮಾವನ ಮೇಲೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಎಸ್‌ಪಿ, ತಾಯಿ, ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಸಾವಿತ್ರಿಯ ತವರು ಮನೆಯವರು ದೂರು ದಾಖಲಿಸಿದ್ದಾರೆ. ಗಂಡನ ಮನೆಯಲ್ಲಿ ತೊಂದರೆ ಕೊಟ್ಟಿದ್ದಕ್ಕೆ ಸಾವಿತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ದಾಖಲಿಸಿದ್ದಾರೆ. ಈ ಸಂಬಂಧ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಮಾಡಲಾಗುತ್ತಿದೆ. 498ಎ, 306 ಹಾಗೂ 302 ಅಡಿ ದೂರು ದಾಖಲಿಸಲಾಗಿದೆ. ಈ ಸಾವಿಗೆ ನಿಖರವಾದ ಕಾರಣ ಏನು ಎಂದು ಪತ್ತೆ ಮಾಡಲಾಗುತ್ತಿದೆ. ಸದ್ಯ ಸಾವಿತ್ರಿಯ ಗಂಡ ಹಾಗೂ ಮಾವನನ್ನು ಬಂಧಿಸಲಾಗಿದೆ ಎಂದರು.


Spread the love

About Karnataka Junction

[ajax_load_more]

Check Also

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಾರಾ ಬೈಕ್ ರೆಂಟಲ್ ಆರಂಭ

Spread the love*ಹುಬ್ಬಳ್ಳಿ:* ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸಾರಾ ಬೈಕ್ ರೆಂಟಲ್ ಆರಂಭಗೊಂಡಿದ್ದು ಪ್ರವಾಸಿಗರು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು …

Leave a Reply

error: Content is protected !!