ಧಾರವಾಡ: ವಿಧಾನ ಸಭೆಯಲ್ಲಿ ರಾಜ್ಯಸಭಾ ಸದಸ್ಯ ನಾಶೀರ್ ಹುಸೇನ್ ಅವರ ಹಿಂಬಾಲಕರು ಪಾಕಿಸ್ತಾನ ಜೈ ಎಂಬ ಘೋಷಣೆ ವಿರೋಧಿಸಿ ಇಂದು ಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿಂದು ಬೃಹತ್ ಪ್ರತಿಭಟನೆ ಮಾಡಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಧಾರವಾಡ ವತಿಯಿಂದ ಕಾರ್ಪೊರೇಷನ್ ರೋಡ್ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಜಾಥಾ ಮೂಲಕ ವಿಧಾನಸೌಧದಲ್ಲಿ ನಡೆದ ನಾಚಿಕೆಗೇಡು ಕೃತ್ಯವನ್ನು ಕಂಡರಿಸಿ ಹೋರಾಟ ಮಾಡಲಾಯಿತು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಖಂಡನೀಯ, ಎಂದು ಎಬಿವಿಪಿ ಧಾರವಾಡ ಸಂಘಟನಾ ಕಾರ್ಯದರ್ಶಿ ಶಿವಕುಮಾರ ಆಕ್ರೋಶ ವ್ಯಕ್ತಪಡಿಸಿದರು ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು..
ಪಾಕಿಸ್ತಾನ ಎಂದು ಘೋಷಣೆ ಕೂಗುವ ಸಂದರ್ಭದಲ್ಲಿ ಅವರ ಪಕ್ಕದಲ್ಲಿ ಇರುವ ವ್ಯಕ್ತಿಗಳು ಸಹಿತ ತಡೆಯುವುದಕ್ಕೆ ಪ್ರಯತ್ನ ಮಾಡಲಿಲ್ಲ ಹಾಗೂ ಅಲ್ಲೇ ಇದ್ದ ನಾಸೀರ್ ಹುಸೇನ ಸಹಿತ ಇದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ, ಪಾಕ್ ಪರ ಘೋಷಣೆ ಕುರಿತು ಪತ್ರಕರ್ತರು ಪ್ರತಿಕ್ರಿಯೆ ಕೇಳಿದಾಗ ನಾಸೀರ್ ಹುಸೇನ್ ನಿರಾಕರಿಸಿ, ಪ್ರಶ್ನೆ ಮಾಡಿದ ಮಾಧ್ಯಮ ಸಿಬ್ಬಂದಿ ಮೇಲೆಯೇ ದರ್ಪ ತೋರಿರುವುದು ನೋಡಿದರೆ ದೇಶದ್ರೋಹಿಗಳಿಗೆ ಬೆಂಬಲ ನೀಡಲು ಹೊರಟಿದ್ದಾರಾ ಎಂಬ ಪ್ರಶ್ನೆ ಮೂಡುತ್ತದೆ.
ಕೆಲವು ದಿನಗಳ ಹಿಂದೆ ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ. ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಲ್ಲದೆ ಇರುವುದಕ್ಕೆ ಪದೇ ಪದೇ ಇಂತಹ ಘಟನೆಗಳು ನಡೆಯುತ್ತವೆ ಸರಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯ ಮೇಲೆ ದೇಶದ್ರೋಹದ ಅಪರಾಧದ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಮತ್ತು ಈ ಪ್ರಕರಣದ ಸೂಕ್ತ ತನಿಖೆ ನಡೆದು ತೀರ್ಪು ಪ್ರಕಟವಾಗುವ ತನಕ ರಾಜ್ಯ ಸಭೆಯ ಸದಸ್ಯರಾಗಿ ಪ್ರಮಾಣ ವಚನವನ್ನು ನೀಡಬಾರದು ಎಂದು ಆಗ್ರಹಿಸುತ್ತೇವೆ. ಸರ್ಕಾರ ಕೂಡಲೇ ತಪ್ಪಿತಸ್ಥ ರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ರಾಜ್ಯಾಧ್ಯಂತ ತೀವ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
Check Also
ರಾಜ್ಯ ಸರ್ಕಾರದಲ್ಲಿ ತುಷ್ಟೀಕರಣ ಮೀತಿಮೀರಿದೆ- ಶಾಸಕ ಮಹೇಶ್ ಟೆಂಗಿನಕಾಯಿ
Spread the loveಹುಬ್ಬಳ್ಳಿ:ಬೆಂಗಳೂರಿನಲ್ಲಿ ಹಸು ಕೆಚ್ಚಲು ಕೊಯ್ಲು ವಿಚಾರ ಅತ್ಯಂತ ಕ್ರೂರತನದಿಂದ ಕೂಡಿದ್ದು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ …