Breaking News

ಕೋಳಿಕೆರೆ ಅಭಿವೃದ್ದಿ ಕಾರ್ಯ – ಪಾಲಿಕೆ ಸದಸ್ಯರು ಪ್ರಶ್ನೆ, ವಾಗ್ವಾದ ಸಭೆ ಮುಂದೂಡಿಕೆ

Spread the love

ಹುಬ್ಬಳ್ಳಿ:ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ ೮ ರ ಸದಸ್ಯರ ಗಮನಕ್ಕೆ ತರದೆ ಕೋಳಿಕೆರೆ ಅಭಿವೃದ್ದಿ ಕಾರ್ಯ ಕೈಗೊಂಡಿರುವ ವಿಚಾರ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.ಗುರುವಾರ ಇಲ್ಲಿನ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಾರ್ಡ ನಂ ೮ ರ ಸದಸ್ಯ ಶಂಕರ ಶೆಳಕೆ ಗಮನ ಸೆಳೆಯುವ ಸೂಚನೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದರು.ವಾರ್ಡ್ ವ್ಯಾಪ್ತಿಯಲ್ಲಿ ಕೋಳಿಕೆರೆ ಅಭಿವೃದ್ದಿ ಕಾರ್ಯ ನನ್ನ ಗಮನಕ್ಕೆ ಬಾರದೆ ನಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ರಾತ್ರಿ ಹಗಲೆನ್ನದೆ ಜನರು ಕರೆ ಮಾಡಿ ದೂರು ನೀಡುತ್ತಿದ್ದಾರೆ. ಅಧಿಕಾರಿಗಳು ಕೆಲವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ವಾರ್ಡ್ ಗೆ ಸಂಬಂಧ ಇಲ್ಲದ ಪ್ರಭಾವಿಗಳು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುತ್ತಿದ್ದಾರೆ ಎಂದರು.ಈ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಪ್ರಶ್ನೆ‌ ಮಾಡಿದ್ದಕ್ಕೆ ನನಗೆ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಪಾಲಿಕೆಯ ಗೌರವಕ್ಕೆ ಧಕ್ಕೆ ಅಗುತ್ತಿದೆ. ಅಧಿಕಾರಿಗಳನ್ನು ಅಮಾನತು‌ ಮಾಡಬೇಕು ಎಂದು ಆಗ್ರಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ವಿರೋಧ ಪಕ್ಷದ ಕೆಲವು ಸದಸ್ಯರು ಹಿಂದೆಯೂ ನಮ್ಮ ವಾರ್ಡ ಗಳಲ್ಲಿ ಈ ರೀತಿ ಆಗಿದೆ. ಆದ್ದರಿಂದ ಸಭೆಗೆ ಚರ್ಚೆಗೆ ಹಾಗೂ ಈ ರೀತಿ ಮಾಡಿದ ಅಧಿಕಾರಿಗಳ ಮೇಲೆ ಕ್ರಮ‌ಜರುಗಿಸಬೇಕು ಎಂದು ಒತ್ತಾಯಿಸಿದರು. ಈ ವಿಷಯ ಎರಡೂ ಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದದ್ದರಿಂದ ಮೇಯರ್ ಅವರು ಸಭೆಯನ್ನು ೧೫ ನಿಮಿಷ ಮುಂದೂಡಿದರು.


Spread the love

About Karnataka Junction

    Check Also

    ಗ್ರಾಹಕರಲ್ಲಿ ಗುಣಮಟ್ಟದ ವಸ್ತುಗಳ ಜಾಗೃತಿಗಾಗಿ ಕ್ವಾಲಿಟಿ ವಾಕ್‌

    Spread the loveಹುಬ್ಬಳ್ಳಿ: ಇಲ್ಲಿಯ ಬ್ಯೂರೋ ಆಫ್ ಇಂಡಿಯನ್ ಸ್ಟಶ್ಚಯಂಡರ್ಡ್ಸ್ (ಬಿಐಎಸ್‌) ಶಾಖೆ ವತಿಯಿಂದ ನಗರದಲ್ಲಿ ಏರ್ಪಡಿಸಿದ್ದ ಕ್ವಾಲಿಟಿ ವಾಕ್‌ಗೆ …

    Leave a Reply

    error: Content is protected !!