ಹುಬ್ಬಳ್ಳಿ: ಮಾರ್ಚ್ 1ರಂದು ಶುಕ್ರವಾರ ಧಾರವಾಡದ ಐ.ಐ.ಟಿ. ಕ್ಯಾಂಪಸ್ ನಲ್ಲಿ ವಿವಿಧ ಸೌಲಭ್ಯಗಳ ಉದ್ಘಾಟನೆಗಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳು ಆಗಮಿಸಲಿದ್ದಾರೆ. ಗೌರವಾನ್ವಿತರು ಹಾಗೂ ಇತರೆ ಗಣ್ಯರು ಬಿ.ಆರ್.ಟಿ.ಎಸ್.ಕಾರಿಡಾರ್ ನಲ್ಲಿ ಸಂಚರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸೂಚನೆಯ ಮೇರೆಗೆ ಮಧ್ಯಾಹ್ನ 1 ಗಂಟೆಯಿಂದ 4 ಗಂಟೆಯವರೆಗೆ ಚಿಗರಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ. ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗಿಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಕೋರಿದ್ದಾರೆ.
Check Also
ಗ್ರಾಹಕರಲ್ಲಿ ಗುಣಮಟ್ಟದ ವಸ್ತುಗಳ ಜಾಗೃತಿಗಾಗಿ ಕ್ವಾಲಿಟಿ ವಾಕ್
Spread the loveಹುಬ್ಬಳ್ಳಿ: ಇಲ್ಲಿಯ ಬ್ಯೂರೋ ಆಫ್ ಇಂಡಿಯನ್ ಸ್ಟಶ್ಚಯಂಡರ್ಡ್ಸ್ (ಬಿಐಎಸ್) ಶಾಖೆ ವತಿಯಿಂದ ನಗರದಲ್ಲಿ ಏರ್ಪಡಿಸಿದ್ದ ಕ್ವಾಲಿಟಿ ವಾಕ್‌ಗೆ …