ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಬ್ಬಾಗಿಲು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ಬೆಳಗ್ಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು ಮಧ್ಯಾಹ್ನ ಆಗಮಿಸಿದ್ದಾರೆ.
ಹುಬ್ಬಳ್ಳಿಗೆ ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಅವರನ್ನು ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೂ ಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದರು.
ಉಪರಾಷ್ಟ್ರಪತಿ ಅವರು ಇಂದು ಸಂಜೆ ಧಾರವಾಡದ ಐಐಟಿಯಲ್ಲಿ ಪ್ರಮುಖ ಸೌಲಭ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ, ಎಂ.ಎಂ.ಜೋಶಿ ನೇತ್ರಾಲಯದ ನೂತನ ಸೂಪರ್ ಸ್ಪೆಷಾಲಿಟಿ ಐ ಕೇರ್ ಆಸ್ಪತ್ರೆ “ಐಸಿರಿ” ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.
