Breaking News

ಮಹದಾಯಿ ಯೋಜನೆ ಜಾರಿಗೆ ಒಂದು ವಾರ ಗಡುವು ನೀಡಿದ ಹೋರಾಟಗಾರರು

Spread the love

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಳಸಾ -ಬಂಡೂರಿ ಹಾಗೂ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒಂದು ವಾರದಲ್ಲಿ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ ಅವರ ಒತ್ತಾಯಿಸಿ ಅನುಮತಿ ಕೊಡಿಸಬೇಕು ಎಂದು ರೈತ ಸೇನಾ ಕರ್ನಾಟಕ ಕಳಸಾ ಬಂಡೂರಿ ಮಹಾದಾಯಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಹಾದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಬೇಕಾದ ಸರಿಯಾದ ದಾಖಲೆಗಳನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಕೇಳಿರುವ ಎಲ್ಲ ದಾಖಲೆಗಳನ್ನು ನೀಡಿದ್ದು, ಅದರ ಸಂಪೂರ್ಣ ಮಾಹಿತಿ ನಾವು ಸಂಗ್ರಹಿಸಿದ್ದೇವೆ ಎಂದರು.
ಆದ್ದರಿಂದ ಕೇಂದ್ರ ಸಚಿವ ಜೋಶಿ ಅವರು ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬಿಟ್ಟು ಯೋಜನೆ ಅನುಮತಿ ಕೊಡಿಸಬೇಕು. ರಾಜ್ಯ ಸರ್ಕಾರ ಟೆಂಡರ್ ಕರೆಲು ಎಲ್ಲ ತಯಾರಿ ನಡೆಸಿದೆ. ಆದರೆ ವನ್ಯ ಜೀವಿಯ ಮಂಡಳಿ ಅನುಮತಿ ದೊರೆಕಿಲ್ಲ. ಇದರಿಂದ ಗುತ್ತಿಗೆದಾರರು ಹಿಂದೆಟು ಹಾಕುತ್ತಿದ್ದಾರೆ. ಅನುಮತಿ ಸಿಕ್ಕರೆ ತಕ್ಷಣ ಯೋಜನೆಯ ಕಾಮಗಾರಿ ಆರಂಭಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಯೋಜನೆ ಅನುಷ್ಠಾನಕ್ಕೆ ಕಳೆದ ೯ ವರ್ಷದಿಂದ ಹೋರಾಟ ಹಾಗೂ ಮನವಿ ನೀಡಲಾಗುತ್ತಿದೆ. ಹೋರಾಟದಲ್ಲಿ ೧೨ ರೈತರು ಹುತಾತ್ಮರಾಗಿದ್ದು, ಯೋಜನೆ ಜಾರಿಗೆ ಆದರೆ ಅವರ ಆತ್ಮಕ್ಕೆ ಶಾಂತಿ ಸಿಗುವುದರ ಜೊತೆಗೆ ರೈತರ ಹೋರಾಟಕ್ಕೆ ಜಯ ಸಿಗಲಿದೆ ಎಂದು ಹೇಳಿದರು.
ಇನ್ನೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದಿನ ಕಾಂಗ್ರೆಸ್ ಸರ್ಕಾರ ಟ್ರುಮಿನಲ್‌ಗೆ ಹೋಗಿದ್ದರಿಂದ ಯೋಜನೆ ವಿಳಂಬವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ನಿಮ್ಮ ಸರ್ಕಾರ ವಿದ್ದಾಗ ಏನು ಮಾಡಿದ್ದಾರೆ ಎಂದು ಹೇಳಲಿ. ಅವರ ತಪ್ಪು ಮಾಡಿದ್ದರಿಂದ ಅವರನ್ನು ಜನ ತಿರಸ್ಕರಿಸಿದರು. ನಿಮ್ಮ ಸರ್ಕಾರ ವಿರುವಾಗ ನೂರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದರು ಸ್ಪಂದಿಸಿಲ್ಲ. ಯೋಜನೆ ಅನುಷ್ಠಾನಕ್ಕೆ ಒಬ್ಬ ಜನಪ್ರತಿನಿ ಅಡ್ಡಗಾಲು ಆಗಿದ್ದಾರೆ ಎಂದು ಹೇಳಿದ್ದಿರಿ. ಅವರು ಯಾರು ಎಂಬುವುದು ಸೂಕ್ತ ಸಮಯದಲ್ಲಿ ಸಾರ್ವಜನಿಕರ ಮುಂದೆ ಇಡುತ್ತೇನೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಗುರು ರಾಯಣಗೌಡ, ಗುರುಶಾಂತಪ್ಪ ಖರೆ, ಮಲ್ಲಣ್ಣ ಅಲೆಕಾರ ಇದ್ದರು.


Spread the love

About Karnataka Junction

    Check Also

    ಹಿಂದೂ ಹಬ್ಬಗಳು ಬಂದಾಗ ಮಾತ್ರ ಕಾಂಗ್ರೆಸ್ಸಿಗೆ ಕಾನೂನು ನೆನಪಾಗುತ್ತೆ: ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್

    Spread the loveಬೆಂಗಳೂರು: ಕಾಂಗ್ರೆಸ್‌ನವರಿಗೆ ಹಿಂದೂ ಹಬ್ಬ ಬಂದಾಗ ಮಾತ್ರ ನೀತಿ, ನಿಯಮ, ಕಟ್ಟಳೆಗಳು ನೆನಪಿಗೆ ಬಂದುಬಿಡುತ್ತವೆ! ತಮ್ಮ ಬಾಂಧವರು …

    Leave a Reply

    error: Content is protected !!