Breaking News

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ*

Spread the love

ಹುಬ್ಬಳ್ಳಿ ಮಾ.3: ಇಂದು ಚಿಟಗುಪ್ಪಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ 5 ವರ್ಷದೊಳಗಿನ ಮಕ್ಕಳಿಗೆ 2 ಹನಿ ಪೋಲಿಯೊ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ, ಶಾಸಕರಾದ ಮಹೇಶ ಟೆಂಗಿನಕಾಯಿ, ಮಹಾಪೌರರಾದ ವೀಣಾ ಬರದ್ವಾಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ಚಿಟಗುಪ್ಪಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶ್ರೀಧರ ಡಿ. ದಂಡಪ್ಪನವರ ಸೇರಿದಂತೆ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ಈ ವರ್ಷ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 1,25,000 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದ್ದು, ಅವಳಿ ನಗರದಾದ್ಯಂತ ಸುಮಾರು 1700 ಅರೋಗ್ಯ ಕಾರ್ಯಕರ್ತರು ಈ ಗುರಿ ತಲುಪುವುದಕ್ಕೆ ಶ್ರಮಿಸಲಿದ್ದಾರೆ. ಈ ಕಾರ್ಯಕ್ರಮವು ಮಾರ್ಚ್ 03 ರಿಂದ 6 ರವರೆಗೆ 04 ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶ್ರೀಧರ ದಂಡಪ್ಪನವರ ಅವರು ಸಹಾಯ ಮಾಡಿದ ರೋಟರಿ ಕ್ಲಬ್, ಲೈನ್ಸ್ ಕ್ಲಬ್, ಅಗರವಾಲ್ ಕಣ್ಣಿನ ಆಸ್ಪತ್ರೆ, ವಿವಿಧ ನರ್ಸಿಂಗ್ ಕಾಲೇಜುಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಇಂದು ಧಾರವಾಡದಲ್ಲಿರುವ ಪಾಲಿಕೆಯ ಹೆರಿಗೆ ಆಸ್ಪತ್ರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶಶಿ ಪಾಟೀಲ, ಆರೋಗ್ಯಾಧಿಕಾರಿ ಡಾ.ಅಶ್ವಿನಿ ಅನಂತಯ್ಯಾ, ಆರ್.ಸಿ.ಎಚ್. ಅಧಿಕಾರಿ ಡಾ.ಸುಜಾತಾ ಹಸವಿಮಠ, ನೋಡಲ್ ಅಧಿಕಾರಿ ಡಾ.ಅನೀಲಕುಮಾರ ಅವರು ಚಾಲನೆ ನೀಡಿದರು.


Spread the love

About Karnataka Junction

    Check Also

    ಹಿಂದೂ ಹಬ್ಬಗಳು ಬಂದಾಗ ಮಾತ್ರ ಕಾಂಗ್ರೆಸ್ಸಿಗೆ ಕಾನೂನು ನೆನಪಾಗುತ್ತೆ: ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್

    Spread the loveಬೆಂಗಳೂರು: ಕಾಂಗ್ರೆಸ್‌ನವರಿಗೆ ಹಿಂದೂ ಹಬ್ಬ ಬಂದಾಗ ಮಾತ್ರ ನೀತಿ, ನಿಯಮ, ಕಟ್ಟಳೆಗಳು ನೆನಪಿಗೆ ಬಂದುಬಿಡುತ್ತವೆ! ತಮ್ಮ ಬಾಂಧವರು …

    Leave a Reply

    error: Content is protected !!