ಹುಬ್ಬಳ್ಳಿ: ದೇಶಾದ್ಯಂತ ಯುವ ಮತದಾರರೆಲ್ಲ ಮೋದಿ ಅವರ ಅಭಿಮಾನಿಗಳಾಗಿ ಪರಿವರ್ತನೆ ಹೊಂದಿದ್ದು, ಬಿಜೆಪಿಯನ್ನೇ ಬೆಂಬಲಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, 90ರಷ್ಟು ಹೊಸ ಮತದಾರರು ಮೋದಿ ಅವರನ್ನು ಬೆಂಬಲಿಸಲಿದ್ದಾರೆ. ಹಾಗಾಗಿ ಈ ಬಾರಿಯೂ ಬಿಜೆಪಿ ದೊಡ್ಡ ಪ್ರಮಾಣದ ಗೆಲುವು ದಾಖಲಿಸಲಿದೆ ಎಂದು ಹೇಳಿದರು.
ದೇಶದಲ್ಲಿ ಯುವ ಮತದಾರರು ಮೋದಿ ಅವರ ಕಾರ್ಯಗಳನ್ನು ನೋಡಿ ಪ್ರಭಾವಿತರಾಗಿದ್ದಾರೆ. ದೇಶದಲ್ಲಾದ ಬದಲಾವಣೆ ಕಂಡು ಮೋದಿ ಪರ ನಿಂತಿದ್ದಾರೆ. ಮೋದಿ ಅವರ ನೇತೃತ್ವದಲ್ಲಿ ಬಿ
ಬಿಜೆಪಿಗೆ ಐತಿಹಾಸಿಕ ಗೆಲುವನ್ನು ತಂದುಕೊಡಲು ಸಿದ್ಧರಾಗಿದ್ದಾರೆ ಎಂದು ಸಚಿವ ಜೋಶಿ ಹೇಳಿದರು.
ಬಿಜೆಪಿಗೆ ಹೆಚ್ಚು ಹೆಚ್ಚು ಯುವ ಮತದಾರರನ್ನು ಸೆಳೆಯಲು ಈಗಾಗಲೇ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಹೋದಲ್ಲೆಲ್ಲ ಉತ್ತಮ ಸ್ಪಂದನೆ ಸಹ ಸಿಗುತ್ತಿದ್ದು, ಬಹಳ ದೊಡ್ಡ ಅಂತರದಲ್ಲಿ ದೇಶಾದ್ಯಂತ ಬಿಜೆಪಿ ಗೆಲ್ಲಲಿದೆ ಎಂದರು.
