ಹುಬ್ಬಳ್ಳಿ ಮಾ.15: ಹುಬ್ಬಳ್ಳಿಯಲ್ಲಿ ಮಂಗಸೂಳಿ ಲಕ್ಷೇಶ್ವರ ರಾಷ್ಟ್ರೀಯ ಹೆದ್ದಾರಿ-218 ಮೇಲ್ಸೇತುವೆ ರಸ್ತೆಯ ಕಾಮಗಾರಿಯು ಪ್ರಗತಿಯಲ್ಲಿದ್ದು, ಪ್ರಸ್ತುತ ಮೇಲಸೇತುವೆಯು ಹುಬ್ಬಳ್ಳಿ ಹಳೇ ಬಸ್ ನಿಲ್ದಾಣಕ್ಕೆ ಹೊಂದಿಕೊಂಡು ಹೋಗುವುದರಿಂದ ಹಳೆ ಬಸ್ ನಿಲ್ದಾಣದಲ್ಲಿದ್ದ ಬಿಆರ್‌ಟಿಎಸ್ ರಾಣಿ ಚನ್ನಮ್ಮ ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಬಸವವನಕ್ಕೆ (ಸುಜಾತ ಟಾಕೀಜ್ ಎದುರಿಗೆ) ಸ್ಥಳಾಂತರಿಸಲಾಗಿದೆ.
ಮಾರ್ಚ 17 ರ ಬೆಳಿಗ್ಗೆ 6 ಗಂಟೆಯಿಂದ ಮೇಲ್ಸೇತುವೆ ಕಾಮಗಾರಿ ಮುಕ್ತಾಯವಾಗುವವರಿಗೆ ಚಿಗರಿ ಬಸ್ಸುಗಳನ್ನು ತಾತ್ಕಾಲಿಕವಾಗಿ ನಿರ್ಮಿಸಿದ ಬಸ್ ನಿಲ್ದಾಣದಲ್ಲಿ ನಿಲುಗಡೆಗೊಳಿಸಲಾಗುವುದು. ರಾಣಿ ಚನ್ನಮ್ಮ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ತಾತ್ಕಾಲಿಕವಾಗಿ ನಿರ್ಮಿಸಿದ ಬಸವವನ ಬಿಆರ್‌ಟಿಎಸ್ ಬಸ್ ನಿಲ್ದಾಣದ ಮೂಲಕ ಪ್ರಯಾಣಿಸಬೇಕು ಎಂದು ಹೆಚ್ ಡಿ ಬಿ ಆರ್ ಟಿ ಎಸ್ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Check Also
ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ
Spread the loveಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್‌ಕಿಟ್‌ನ …