ಲೋಕಾ ಚುನಾವಣೆಗೆ ಜಿಲ್ಲಾಡಳಿತ ಕಣ್ಗಾವಲು

Spread the love

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಲೋಕಸಭಾ ಚುನಾವಣೆ ನಡೆಸಲು ಧಾರವಾಡ ಜಿಲ್ಲೆಯಾದ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ದಿನದ ಇಪ್ಪತ್ತು ನಾಲ್ಕು ಗಂಟೆಗಳ ಕಾಲ ಹದ್ದಿನ ಕಣ್ಣು ಇರಿಸಿ ಕರ್ತವ್ಯಕ್ಕೆ ಮುಂದಾಗಿದೆ.ಚುನಾವಣೆಗೂ ಮುನ್ನವೇ ಹಣ, ಮದ್ಯ ಹಾಗೂ ಮಾದಕ ವಸ್ತುಗಳ ಸಾಗಾಟ ನಿಯಂತ್ರಿಸಲು ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲೆಯ ಗಡಿ ಪ್ರದೇಶ ಮತ್ತು ನಗರ ಪ್ರವೇಶಿಸುವ ಪ್ರಮುಖ 23 ಸ್ಥಳಗಳಲ್ಲಿ ಚೆಕ್‌ಪೋಸ್ಟ್ ತೆರೆದು ಕಟ್ಟೆಚ್ಚರ ವಹಿಸಲಾಗಿದೆ.ಚುನಾವಣಾ ಅಕ್ರಮ ತಡೆಗಟ್ಟಲು ಆಡಳಿತ ವ್ಯವಸ್ಥೆ ಸಜ್ಜು ಗೊಳಿಸಬೇಕು. ರಾಜಕೀಯ ನಾಯಕರಿಂದ ಅಂತರ ಕಾಯ್ದುಕೊಳ್ಳಬೇಕು. ಅಕ್ರಮ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎನ್ನುವ ಚುನಾವಣಾ ಆಯೋಗ ಸೂಚನೆ ಮೇರೆಗೆ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಚೆಕ್‌ ಪೋಸ್ಟ್ ಹಾಕಿ ಅಕ್ರಮಗಳ ತಡೆಗಳಿಗೆ ಅಡಳಿತ ಸಜ್ಜಾಗಿದೆ.ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಉತ್ತರ ಕನ್ನಡ, ಹಾವೇರಿ, ಗದಗ ಜಿಲ್ಲೆಗಳಿಂದ ಧಾರವಾಡ ಪ್ರವೇಶಿಸುವ ಗಡಿ ಭಾಗಗಳಲ್ಲಿ ಹಾಗೂಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ಗಳನ್ನು ನಿರ್ಮಿಸಲಾಗಿದೆ. ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ 12 ಹಾಗೂ ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ 11 ಚೆಕ್‌ಪೋಸ್ಟ್ ಹಾಕಲಾಗಿದೆ. 120ಕ್ಕೂ ಹೆಚ್ಚು ಪೊಲೀಸ್ಸಿಬ್ಬಂದಿ ಕರ್ತವ್ಯದಲ್ಲಿ ನಿರತರಾಗಿದ್ದಾರೆ.ಒಂದೊಂದು ಚೆಕ್‌ಪೋಸ್ಟ್‌ನಲ್ಲಿ ನಾಲ್ಕರಿಂದ ಐದು ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ದಿನಕ್ಕೆ ಮೂರು ಪಾಳಿಗಳಲ್ಲಿ ಕಾರ್ಯ ನಿರ್ವಹಿಸುವ ಅವರು, ಅನುಮಾನ ಬಂದ ವಾಹನಗಳನ್ನು ತಡೆದು ವಿಚಾರಣೆಗೊಒಳಪಡಿಸುತ್ತಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದರೆ ವಾಹನಗಳ ತಪಾಸಣೆ ನಡೆಸಿ, ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಬೈಕ್‌ನಲ್ಲಿ ಸಂಚರಿಸುವವರ ಮೇಲೂ ನಿಗಾ ಇಡಲಾಗುತ್ತಿದೆ.
‘ಶಾಂತಿಯುತ ಚುನಾವಣೆ ನಡೆಸಲು ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರ ಹಾಗೂ ವಿವಿಧ ಕಡೆಗಳಲ್ಲಿ ಒಂಬತ್ತು ವಿಚಕ್ಷಣಾ ದಳ ರಚಿಸಲಾಗಿದೆ. ನಗರದ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್ ಹಾಕಿದ್ದು, ಪ್ರಮುಖ ಮುಖ್ಯ ಹಾಗೂ ಒಳ ರಸ್ತೆಗಳಲ್ಲೂ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಚುನಾವಣೆ ಘೋಷಣೆ ಆಗುತ್ತಿದ್ದಂತೆ ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಇಲ್ಲಿನ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ಬಿಗಿಗೊಳಿಸಲಾಗಿದ್ದು, ಅಧಿಕಾರಿಗಳು ಹಗಲು ರಾತ್ರಿ ಕಾರ್ಯ ನಿರ್ವಹಿಸುತ್ತಿದ್ದು ಧಾರವಾಡ ಜಿಲ್ಲೆಯ ನವಲಗುಂದ, ‌ಕಲಘಟಗಿ, ಅಳ್ನಾವರ, ಕುಂದಗೋಳ ತಾಲೂಕುಗಳಲ್ಲಿ ಸಹ ಚಕ್ ಪೋಸ್ಟ್ ತೆರೆಯಲಾಗಿದೆ .
ವಿಧಾನಸಭಾ ಕ್ಷೇತ್ರವ್ಯಾಪ್ತಿಯ ನವಲಗುಂದ ಹೊರವಲಯದ ನರಗುಂದ ರೋಣ ಕ್ರಾಸ್ ಬಳಿ ಹಾಗೂ ಅಣ್ಣಿಗೇರಿ ತಾಲ್ಲೂಕಿನ ಅಣ್ಣಿಗೇರಿ ಗದಗ ರಸ್ತೆಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ನವಲಗುಂದ ಹಾಗೂ ಅಣ್ಣಿಗೇರಿ ಸಂಪರ್ಕಿಸುವ ಎಲ್ಲ ಒಳ ರಸ್ತೆಗಳಲ್ಲಿ ಕೂಡ ಪೊಲೀಸ್ ಬೀಟ್ ಅಳವಡಿಸಲಾಗಿದೆ ಎಂದು ಕರ್ತವ್ಯ ನಿರತ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.


Spread the love

Leave a Reply

error: Content is protected !!