ಬೆಳಗಾವಿ ಬಿಜೆಪಿ ಟಿಕೆಟ್: ಪ್ರಧಾನಿ ನೇತೃತ್ವದ ಸಭೆಯಲ್ಲಿ ತೀರ್ಮಾನ- ಶೆಟ್ಟರ್

Spread the love

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಚುನಾವಣಾ ಸಮಿತಿ ಸಭೆ ನಾಳೆ, ಮಾಡಿದ್ದು ನಡೆಯಲಿದ್ದು, ಬೆಳಗಾವಿ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡ ಜಗದೀಶ ಶೆಟ್ಟರ್ ಹೇಳಿದರು.
ನವದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಸಭೆಯಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.
ಬಿಜೆಪಿ ವರಿಷ್ಠರು ಹಾಗೂ ಬೆಳಗಾವಿ ಟಿಕೆಟ್ ಆಕಾಂಕ್ಷಿ, ಶಾಸಕರು, ಮಾಜಿ ಶಾಸಕರ ಜೊತೆ ಚರ್ಚಿಸಿದ್ದೇನೆ. ಎಲ್ಲರ ವಿಶ್ವಾಸ ತೆಗೆದುಕೊಂಡಿದ್ದೇನೆ ಎಂದು ಹೇಳಿದರು.
ಬೆಳಗಾವಿಯ ಬಿಜೆಪಿ ನಾಯಕರಾದ ಪ್ರಭಾಕರ ಕೋರೆ, ಅಭಯ ಪಾಟೀಲ, ಈರಣ್ಣ ಕಡಾಡಿ ಸೇರಿದಂತೆ ಶಾಸಕರು, ಮಾಜಿ ಶಾಸಕರು ಹಾಗೂ ಹಲವು ನಾಯಕರ ಜೊತೆ ಚರ್ಚಿಸಿದ್ದೇನೆ. ಪಕ್ಷದ ತೀರ್ಮಾನದಂತೆ ಕೆಲಸ ಮಾಡಲು ಬದ್ಧರಿರುವುದಾಗಿ ಅವರು ಹೇಳಿದ್ದಾರೆ ಎಂದರು.
ಟಿಕೆಟ್ ತಪ್ಪಿಸಲು ಮುಂದಾಗಿರುವವರ ಬಗ್ಗೆ ಮಾತನಾಡಲ್ಲ ಎಂದರು.


Spread the love

Leave a Reply

error: Content is protected !!