ಹೋಳಿ ಹಬ್ಬ; ಮದ್ಯ ಮಾರಾಟ, ಸಾಗಾಟ, ಮದ್ಯಪಾನ ನಿಷೇಧ

Spread the love

ಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಾರ್ಚ್ 25 ರಿಂದ 29 ರವರೆಗೆ ಹೋಳಿ ಹಬ್ಬದ ಅಂಗವಾಗಿ ಬಣ್ಣದ ಓಕುಳಿ (ರಂಗಪಂಚಮಿ) ಆಚರಿಸುವುದರಿಂದ, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಧಾರವಾಡ ನಗರದಲ್ಲಿ ಮಾರ್ಚ್ 25 ರಂದು ಸಂಜೆ 6 ಗಂಟೆಯಿಂದ ಮಾರ್ಚ್ 26 ರಂದು ಮಧ್ಯರಾತ್ರಿ 11.59 ಗಂಟೆಯವರೆಗೆ ಹಾಗೂ ಹುಬ್ಬಳ್ಳಿ ನಗರದಲ್ಲಿ ಮಾರ್ಚ್ 27 ರಂದು ಸಂಜೆ 6 ಗಂಟೆಯಿಂದ ಮಾರ್ಚ 30 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ, ಸಾಗಾಟ ಹಾಗೂ ಮದ್ಯಪಾನ ನಿಷೇಧಾಜ್ಞೆ ಹೊರಡಿಸಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಆದೇಶಿಸಿದ್ದಾರೆ.
ಮದ್ಯದ ಅಂಗಡಿ, ಬಾರ್, ಕ್ಲಬ್ ಮತ್ತು ಹೊಟೇಲ್ ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಮದ್ಯದ ಅಂಗಡಿ, ಕೆ.ಎಸ್.ಬಿ.ಸಿ.ಎಲ್ ಡಿಪೋ ಹಾಗೂ ಹೊಟೇಲ್ ಗಳಲ್ಲಿರುವ ಬಾರ್ ಗಳನ್ನು ಮುಚ್ಚಬೇಕು. ಎಲ್ಲಾ ಅಬಕಾರಿ ಸನ್ನದು ಅಂಗಡಿಗಳನ್ನು ತೆರೆಯಬಾರದು. ಸಾರ್ವಜನಿಕ ಶಾಂತತೆಯನ್ನು ಕಾಪಾಡಿಕೊಂಡು ಹೋಗುವಂತೆ ಆದೇಶದಲ್ಲಿ ಅವರು ತಿಳಿಸಿದ್ದಾರೆ.


Spread the love

Leave a Reply

error: Content is protected !!