ಬೆಳಗಾವಿ ಕುಂದಾ ನಗರಿ ಬೆಳಗಾವಿಯನ್ನ ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದ್ದು, ಮಂಗಳಾ ಅಂಗಡಿ 2,903 ಮತಗಳ ಅಂತರದಲ್ಲಿ ಗೆಲುವಿನ ಮಾಲೆ ಧರಿಸಿದ್ದಾರೆ.ಒಟ್ಟು 81 ಸುತ್ತಿನ ಮತ ಎಣಿಕೆ ಕ್ಷಣ ಕ್ಷಣಕ್ಕೂ ಕುತೂಹಲವುನ್ನುಂಟು ಮಾಡಿತ್ತು. ಆರಂಭದಲ್ಲಿ ಸುಮಾರು 40 ಸುತ್ತುಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು. ನಂತರ ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರು. 75ನೇ ಸುತ್ತಿನ ಬಳಿಕ ಸತೀಶ್ ಜಾರಕಿಹೊಳಿ ಅವರ ಮುನ್ನಡೆಯ ಅಂತರ ಕಡಿಮೆಯಾಗುತ್ತಾ ಬಂತು. 80ನೇ ಸುತ್ತಿನಲ್ಲಿ ಮಂಗಳಾ ಅಂಗಡಿ 3101 ಮತಗಳ ಭಾರೀ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಕಾಂಗ್ರೆಸ್‍ಗೆ ಶಾಕ್ ನೀಡಿದರು. ಸುರೇಶ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯಿಂದಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಸ್ಪರ್ಧಿಸಿದ್ದರು.
Check Also
ಪಕ್ಷೇತರ ಅಭ್ಯರ್ಥಿ ಜಿ ಜಿ ದ್ಯಾವನಗೌಡ್ರ ಕಣದಲ್ಲಿ ಮುಂದುವರೆಯಲು ನಿರ್ಧಾರ ?
Spread the loveಹುಬ್ಬಳ್ಳಿ: .ಶಿಗ್ಗಾವ ಸವಣೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ ನಡೆದಿದ್ದು ಯಾವುದೇ …